Home Karnataka State Politics Updates Actress Shruti : ಬಿಜೆಪಿ ನಾಯಕಿ, ನಟಿ ಶ್ರುತಿ ವಿರುದ್ಧ ಹಿರೆಕೇರೂರಿನಲ್ಲಿ ದೂರು ದಾಖಲು

Actress Shruti : ಬಿಜೆಪಿ ನಾಯಕಿ, ನಟಿ ಶ್ರುತಿ ವಿರುದ್ಧ ಹಿರೆಕೇರೂರಿನಲ್ಲಿ ದೂರು ದಾಖಲು

Actress Shruti

Hindu neighbor gifts plot of land

Hindu neighbour gifts land to Muslim journalist

Actress Shruti : ಹಿರೆಕೇರೂರಿನಲ್ಲಿ ಮಹಿಳಾ ಮೋರ್ಚಾ ಸಮಾವೇಶ ಆಯೋಜಿಸಲಾಗಿದ್ದು, ಈ ವೇಳೆ ಮಾನಹಾನಿಯಾಗುವಂತಹ ಭಾಷಣ ಮಾಡಿದ್ದ ನಟಿ ಶ್ರುತಿ (Actress Shruti) ವಿರುದ್ಧ ಹಿರೆಕೇರೂರಿನಲ್ಲಿ ದೂರು ದಾಖಲು ಆಗಿದೆ ಎಂದು ವರದಿಯಾಗಿದೆ.

ಬಿಜೆಪಿ ನಾಯಕಿ, ನಟಿ ಶ್ರುತಿ ಅವರು ಮಾಜಿ ಸಚಿವ ಬಿ ಸಿ ಪಾಟೀಲ್ ಪರ ಚುನಾವಣಾ ಪ್ರಚಾರ ಮಾಡುವ ಭರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ರಾಜ್ಯಕೀಯ ಪಕ್ಷಗಳಿವೆ. ಯಾವುದೇ ಬೇರೆ ಪಕ್ಷದ ಬಗ್ಗೆ ನಾನು ಜಾಸ್ತಿ ಮಾತನಾಡಲ್ಲ. ಆದರೆ ಒಂದೆ ಮಾತಿನಲ್ಲಿ ಹೇಳಿ ಮುಗಿಸಿಬಿಡ್ತೇನಿ.

ನಿಮ್ಮ‌ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದ್ರೆ ಜೆಡಿಎಸ್ ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದ್ರೆ ಕಾಂಗ್ರೇಸ್ ಗೆ ಮತ ಹಾಕಿ. ಭಾರತದಲ್ಲಿ ಭಾರತೀಯರ ವಂಶ ಅಭಿವೃದ್ಧಿ ಆಗಬೇಕಾದ್ರೆ ಭಾರತೀಯ ಜನತಾ ಪಾರ್ಟಿ ಗೆ ಮತ ಹಾಕಿ ಮಾನಹಾನಿಯಾಗುವಂತಹ ಭಾಷಣ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.

ಈ ವಿಚಾರವನ್ನು ಮನಗಂಡು ಹಿರೆಕೇರೂರು ನೋಡಲ್ ಅಧಿಕಾರಿ ಪಂಪಾಪತಿ ಎಂಬುವವರಿಂದ ಠಾಣೆಗೆ ದೂರು ನೀಡಿದ್ದು, ಹಿರೆಕೇರೂರು ಪೊಲೀಸರು ಶ್ರುತಿ ವಿರುದ್ಧ ಪ್ರಕರಣವನ್ನು ದಾಖಲಾಗಿದೆ ಎಂದು ತಿಳಿಯಲಾಗಿದೆ.