Home Karnataka State Politics Updates Basavanagowda Yatnal : ಕೊನೆಗೂ ಹೈಕಮಾಂಡ್ ನೋಟಿಸ್ ಗೆ ಉತ್ತರ ಕೊಟ್ಟ ಯತ್ನಾಳ್ – ಏನು...

Basavanagowda Yatnal : ಕೊನೆಗೂ ಹೈಕಮಾಂಡ್ ನೋಟಿಸ್ ಗೆ ಉತ್ತರ ಕೊಟ್ಟ ಯತ್ನಾಳ್ – ಏನು ಹೇಳಿದ್ದಾರೆ ಗೊತ್ತಾ?

Hindu neighbor gifts plot of land

Hindu neighbour gifts land to Muslim journalist

Basavanagowda Yatnal: ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿ ನೋಟಿಸ್ ನೀಡಿತ್ತು. ಇದುವರೆಗೂ ಈ ನೋಟಿಸ್ ಗೆ ಉತ್ತರಿಸದ ಯತ್ನಾಳ್ ಅವರು ಕೊನೆಗೂ ಇದೀಗ ಉತ್ತರವನ್ನು ನೀಡಿದ್ದಾರೆ. ಹಾಗಿದ್ರೆ ಯತ್ನಾಳ್ ಅವರು ಹೇಳಿದ್ದೇನು? ಹೈಕಮಾಂಡ್ ನೋಟಿಸ್ ಗೆ ಅವರು ಕೊಟ್ಟ ಉತ್ತರವೇನು?

 

ಯತ್ನಾಳ್ ನೀಡಿದ ಉತ್ತರವೇನು?

ಬಿಜೆಪಿ ಕೇಂದ್ರ ಶಿಸ್ತು ಸಮಿತಿಗೆ ಯತ್ನಾಳ್ ನೀಡಿರುವ ಉತ್ತರವೇನು ಎಂಬುದರ ವಿವರ ಸದ್ಯ ಬಹಿರಂಗವಾಗಿಲ್ಲ. ಆದಾಗ್ಯೂ, ವಿಜಯೇಂದ್ರ ವಿರುದ್ಧ ದೂರುಗಳ ಸರಮಾಲೆಯನ್ನೇ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ರಾಜಕೀಯ ಮಾಡುತ್ತಿದೆ. ನಾನು ಯಾವುದೇ ಬಣ ರಾಜಕೀಯ ಮಾಡಿಲ್ಲ. ಪಕ್ಷದ ಶಿಸ್ತನ್ನು ನಾನು ಉಲ್ಲಂಘಿಸಿಲ್ಲ’ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

 

ಪಕ್ಷದ ಚೌಕಟ್ಟಿನಲ್ಲಿ ವಕ್ಫ್​ ವಿರುದ್ಧ ಹೋರಾಟ ಮಾಡಿದ್ದೇವೆ. ತಂಡವಾಗಿ ಹೋರಾಟ ಮಾಡಿ ನಾವು ಯಶಸ್ವಿಯಾಗಿದ್ದೇವೆ. ವಕ್ಫ್ ಕುರಿತ​ ಹೋರಾಟವನ್ನು ಉನ್ನತ ನಾಯಕರು ಸಮರ್ಥಿಸಿದ್ದಾರೆ. ಬಿ.ವೈ.ವಿಜಯೇಂದ್ರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾರ್ಯಕರ್ತರು, ನಾಯಕರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಯತ್ನಾಳ್ ಉತ್ತರಿಸಿದ್ದಾರೆ.