Home Karnataka State Politics Updates ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡಿದ್ದರೆ ವಿರುದ್ದ ಕ್ರಮ -ಡಾ.ಅಶ್ವತ್ಥ ನಾರಾಯಣ

ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡಿದ್ದರೆ ವಿರುದ್ದ ಕ್ರಮ -ಡಾ.ಅಶ್ವತ್ಥ ನಾರಾಯಣ

Hindu neighbor gifts plot of land

Hindu neighbour gifts land to Muslim journalist

ಬೆಳಗಾವಿ : ನಕಲಿ ಅಂಕಪಟ್ಟಿ ಮೂಲಕ ಯಾವುದೇ ರೀತಿಯ ಹುದ್ದೆ ಪಡೆದುಕೊಂಡಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

ಅವರು ಸೋಮವಾರ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿ, ಬೆಂಗಳೂರು ವಿಶ್ವವಿದ್ಯಾಲಯ ಯಾವುದೇ ರೀತಿಯಲ್ಲಿ ನಕಲಿ ಅಂಕಪಟ್ಟಿ, ನಕಲಿ ಪದವಿ ಪ್ರದಾನ ಮಾಡಿಲ್ಲ. ಹಾಗಾಗಿ ವಿವಿ ಅಧಿಕಾರಿಗಳ ವಿರುದ್ಧ ನಕಲಿ ಅಂಕಪಟ್ಟಿ ಪ್ರಕರಣ ಸಂಬಂಧ ಯಾವುದೇ ರೀತಿಯ ಕ್ರಮವಿಲ್ಲ. ಆದರೆ, ನಕಲಿ ಅಂಕಪಟ್ಟಿ ನೀಡಿ ಹುದ್ದೆ ಗಿಟ್ಟಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹೊರಗೆ ಖಾಸಗಿಯಲ್ಲಿ ನೇಮಕಾತಿ ವೇಳೆ ಅಂಕಪಟ್ಟಿ ನಕಲಿ ಮಾಡಲಾಗಿದೆ. ವಿಶ್ವವಿದ್ಯಾಲಯದ ಪರಿಶೀಲನೆಗೆ ಕಳಿಸಿದಾಗ ಬೆಳಕಿಗೆ ಬಂದಿದೆ. ಪತ್ತೆಯಾಗುತ್ತಿದ್ದಂತೆ ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.