Home Karnataka State Politics Updates 7th pay commission: ಸರ್ಕಾರಿ ನೌಕರರೆ ಗಮನಿಸಿ- 7ನೇ ವೇತನ ಆಯೋಗದ ಜಾರಿ ಬಗ್ಗೆ ಗೃಹ...

7th pay commission: ಸರ್ಕಾರಿ ನೌಕರರೆ ಗಮನಿಸಿ- 7ನೇ ವೇತನ ಆಯೋಗದ ಜಾರಿ ಬಗ್ಗೆ ಗೃಹ ಸಚಿವರಿಂದ ಬಂತು ಭರ್ಜರಿ ಗುಡ್ ನ್ಯೂಸ್ !!

7th pay commission

Hindu neighbor gifts plot of land

Hindu neighbour gifts land to Muslim journalist

7th pay commission: ಸರ್ಕಾರಿ ನೌಕರರೆ 7ನೇ ವೇತನ ಆಯೋಗದ (7th pay commission) ಜಾರಿ ಬಗ್ಗೆ ಗೃಹ ಸಚಿವರಿಂದ ಭರ್ಜರಿ ಗುಡ್ ನ್ಯೂಸ್ ಬಂದಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ ಏಳನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ಆದರ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಭರವಸೆ ನೀಡಿದ್ದಾರೆ.

ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ
ಜಿ.ಪರಮೇಶ್ವರ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನವೆಂಬರ್ ಒಳಗೆ ವರದಿ ಸಲ್ಲಿಸುವಂತೆ ವೇತನ ಆಯೋಗಕ್ಕೆ ಸೂಚಿಸಲಾಗಿದೆ. ವರದಿ ಬಂದ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಭರವಸೆ ನೀಡಿದ್ದಾರೆ. ವೇತನ ಆಯೋಗ ಜಾರಿಯಾಗಲಿದ್ದು, ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಲು ಸರ್ಕಾರ ಬದ್ಧವಾಗಿದ್ದು, ವರದಿ ಪೀಡಲು ಸಮಿತಿ ರಚಿಸಲಾಗಿದೆ. ವರದಿ ಬಂದ ನಂತರ ಜಾರಿ ಮಾಡಲಾಗುವುದು. ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿ ಮಾಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ. ಅದರಂತೆ ಸರ್ಕಾರ ನಡೆದುಕೊಳ್ಳಲಿದ್ದು, ಜಾರಿ ಮಾಡಿಯೇ ತೀರುತ್ತೇವೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ‘ಏಳನೇ ವೇತನ ಆಯೋಗದ ವರದಿ ಬಂದ ತಕ್ಷಣ ಜಾರಿ ಮಾಡಬೇಕು. ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಬೇಕು. ತುಟ್ಟಿ ಭತ್ಯೆಯನ್ನು ಶೇ 23ರಷ್ಟು ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

 

ಇದನ್ನು ಓದಿ: Vikram-Pragyan: ಚಂದ್ರನ ಮೇಲೆ ಲ್ಯಾಂಡ್ ಆಗುವಾಗ ವಿಕ್ರಮ್ ಲ್ಯಾಂಡರ್ ಏನು ಮಾಡಿತ್ತು ಗೊತ್ತಾ ?!! ಅಬ್ಬಬ್ಬಾ.. ಬಯಲಾಯ್ತು ಭಯಾನಕ ಸತ್ಯ