Home Karnataka State Politics Updates Good News : ರಾಜ್ಯದ ಜನತೆಗೆ ಸಿಹಿ ಸುದ್ದಿ | ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ...

Good News : ರಾಜ್ಯದ ಜನತೆಗೆ ಸಿಹಿ ಸುದ್ದಿ | ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ನಕಾರ!!

Hindu neighbor gifts plot of land

Hindu neighbour gifts land to Muslim journalist

ಹಾಲಿನ ದರ ಏರಿಕೆಯಾಗಿ ಆರ್ಥಿಕ ಸಂಕಷ್ಟ ಎದುರಿಸುವ ಚಿಂತೆಯಲ್ಲಿದ್ದ ಜನತೆಗೆ ಸಿಎಂ ಸಿಹಿ ಸುದ್ದಿ ನೀಡಿ, ಚಿಂತೆಯ ಮೂಟೆಯನ್ನು ಕೊಂಚ ಮಟ್ಟಿಗೆ ಇಳಿಸಿದ್ದಾರೆ.

ಇತ್ತೀಚೆಗಷ್ಟೇ ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ ಕೆಎಂಎಫ್ ಪ್ರಸ್ತಾವನೆಗೆ ಬ್ರೇಕ್ ನೀಡಿ, ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ.

ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡಲು ಮನವಿ ಸಲ್ಲಿಸಿತ್ತು ಆದರೆ, ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದ್ದು, ದರ ಏರಿಕೆಯ ಬದಲಿ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿ , ದರ ಏರಿಕೆಯ ಮನವಿಗೆ ಒಪ್ಪಿಗೆ ನೀಡದೆ ಜನತೆಗೆ ನೆರವಾಗಿದ್ದಾರೆ.