Home Karnataka State Politics Updates ‘ಹಿಂದೂ’ ಭಾರತೀಯ ಪದವೇ ಅಲ್ಲ, ಅರ್ಥ ಬಹಳ ಅಶ್ಲೀಲ: ಸತೀಶ್ ಜಾರಕಿಹೊಳಿ

‘ಹಿಂದೂ’ ಭಾರತೀಯ ಪದವೇ ಅಲ್ಲ, ಅರ್ಥ ಬಹಳ ಅಶ್ಲೀಲ: ಸತೀಶ್ ಜಾರಕಿಹೊಳಿ

Hindu neighbor gifts plot of land

Hindu neighbour gifts land to Muslim journalist

ಮಾಜಿ ಸಚಿವ ಸತೀಶ್ ಜಾರಕಿಹೊಳಿ ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಹೇಳಿದ್ದಾರೆ. ‘ಹಿಂದೂ’ ಭಾರತೀಯ ಪದವೇ ಅಲ್ಲ ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ’ ಎಂಬ ಹೇಳಿಕೆಯನ್ನು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

‘ಭಾರತಕ್ಕೂ, ಪರ್ಷಿಯನ್ನೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ ಎಂಬುದನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಎನ್ನುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಹೇಳಿದ್ದಾರೆ.

“ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದರು. ಶಿವಾಜಿ ಎಲ್ಲರನ್ನು ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್ ಇರುವುದು ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಶಿವಾಜಿ ಮಸೀದಿ ನಿರ್ಮಾಣ ಮಾಡಿರುವ ಇತಿಹಾಸವಿದೆ. ಅವರ ಕಾಲದಲ್ಲಿ ಸಮಾನತೆಯಿತ್ತು. ಆದರೆ ಈಗ ಮರಾಠಾ, ಮುಸ್ಲಿಂ, ದಲಿತರ ನಡುವೆ ದಿನನಿತ್ಯ ಜಗಳವಾಗುತ್ತಿವೆ.

ಇತಿಹಾಸ ಬೇರೆ ಇದೆ. ನಮಗೆ ಬೇರೆ ಇತಿಹಾಸ ತೋರಿಸಲಾಗುತ್ತಿದೆ. ಬಸವಣ್ಣ, ಶಿವಾಜಿ, ಸಂತ ತುಕಾರಾಮ ಸೇರಿದಂತೆ ಮಹಾನ್ ಪುರುಷರ ಇತಿಹಾಸವನ್ನು ತಿರುಚಿ ತೋರಿಸಲಾಗುತ್ತಿದೆ. ಬಸವಣ್ಣವರ ಕಾಲದಲ್ಲಿ ಸಾಕಷ್ಟು ಹತ್ಯೆಗಳು ನಡೆದವು.

ಅದನ್ನು ಮುಸ್ಲಿಮರು ಮಾಡಿದ್ರಾ? ಒಂದು ಲಕ್ಷ ಜೈನರ ಹತ್ಯೆಗಳಾಗಿವೆ ಎಂದು ಜೈನ್ ಸ್ವಾಮೀಜಿ ಹೇಳಿದ್ದಾರೆ. ಜೈನರ ಹತ್ಯೆಯನ್ನು ಆದೀಲ್ ಶಾ ಮಾಡಿದ್ರಾ? ಈ ಎಲ್ಲದರ ಕುರಿತು ಚರ್ಚೆ ಆಗಬೇಕಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.