Home Karnataka State Politics Updates Jagadish Shetter: ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜಿನಾಮೆ ನೀಡಿದ್ದು, ಇನ್ನೂ ಪಕ್ಷಕ್ಕೆ ಕೊಟ್ಟಿಲ್ಲ ಎಂದ...

Jagadish Shetter: ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜಿನಾಮೆ ನೀಡಿದ್ದು, ಇನ್ನೂ ಪಕ್ಷಕ್ಕೆ ಕೊಟ್ಟಿಲ್ಲ ಎಂದ ಶೆಟ್ಟರ್! ಹಾಗಿದ್ರೆ ಬಿಜೆಪಿಯಲ್ಲೇ ಉಳಿತಾರಾ ಮಾಜಿ ಸಿಎಂ!

Jagadish Shetter

Hindu neighbor gifts plot of land

Hindu neighbour gifts land to Muslim journalist

Former CM Jagadish Shetter :ಮಾಜಿ ಸಿಎಂ ಜಗದೀಶ್ ಶೆಟ್ಟರ್(Former CM Jagadish Shetter)ಈ ಸಲದ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜಿನಾಮೆ ಸಲ್ಲಿಕೆ ಮಾಡಿದ್ದು, ಕಾಂಗ್ರೆಸ್(Congress) ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ನಡುವೆಯೇ ಶೆಟ್ಟರ್ ಅವರು ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಹೊರತು ಬಿಜೆಪಿ(BJP)ಗೆ ರಾಜಿನಾಮೆಯನ್ನು ನೀಡಿಲ್ಲ. ಕೆಲವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ಹೇಳಿದ್ದು, ಪಕ್ಷದಲ್ಲೆಯೇ ಉಳಿಯುತ್ತಾರಾ ಎಂಬ ಗುಮಾನಿ ಮೂಡಿದೆ.

ಹೌದು, ಹುಬ್ಬಳ್ಳಿ(Hubballi)ಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ(Bangalore) ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾಧ್ಯಮಗಳೊಂದಿಗೆ ಮಾತನಾಡಿ ಈಗಾಗಲೇ ನಾನು ಏನು ಹೇಳಬೇಕೋ ಎಲ್ಲವನ್ನೂ ಹೇಳಿದ್ದೇನೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಹೊರತು ಬಿಜೆಪಿಗೆ ರಾಜಿನಾಮೆಯನ್ನು ನೀಡಿಲ್ಲ. ಕೆಲವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಅಲ್ಲದೆ ಈಗ ನಾನು ಶಿರಿಸಿ(Shirsi)ಯಲ್ಲಿ ಹಲವಾರು ವಿಚಾರಗಳನ್ನ ಹೇಳಿದ್ದೀನಿ. ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ. ಇವತ್ತು ಅಥವಾ ನಾಳೆ ಮುಂದಿನ ತೀರ್ಮಾನ ಕೈಗೊಳ್ತೀನಿ. ಈಗ ಕಲೆವರೊಂದಿಗೆ ಚರ್ಚೆ ಮಾಡಿ, ಎಲ್ಲವನ್ನು ನೋಡಿಕೊಂಡು ಮುಂದಿನ ತೀರ್ಮಾನ ಮಾಡ್ತೀನಿ. ನನಗೆ ತುಂಬಾ ನೋವಾಗಿದೆ. ಯಾವುದೇ ರೀತಿಯಲ್ಲೂ ನನ್ನ ನೋವಿಗೆ ಪರಿಹಾರ ಸಿಕ್ಕಿಲ್ಲ. ನಾನು ಕಟ್ಟಿ ಬೆಳಿಸಿದ ಪಕ್ಷದಿಂದ ರಾಜೀನಾಮೆ ಕೊಟ್ಟ ಬಳಿಕ ಮುಂದಿನ ತೀರ್ಮಾನ ಮಾಡ್ತೀನಿ. ಬಿಎಸ್ ಯಡಿಯೂರಪ್ಪ ಹೇಳಿಕೆಗೆ ನಾನು ಈಗಾಗಲೆ ಪ್ರತಿಕ್ರಿಯೆ ಕೊಟ್ಟಿದ್ದೀನಿ. ಈಗ ಮತ್ತೊಮ್ಮೆ ಅದೇ ವಿಚಾರವನ್ನು ನಾನು ಮಾತನಾಡುವುದಿಲ್ಲ ಎಂದರು.

ಈಗಾಗಲೇ ಬಿಜೆಪಿಯಿಂದ ಕೇಂದ್ರ ಮಂತ್ರಿ ಮತ್ತು ರಾಜ್ಯಪಾಲರ ಹುದ್ದೆಗೆ ಆಫರ್ ಬಂದಿದೆ ಎಂದು ಕೇಳಿದ ಪ್ರಶ್ನೆಗೆ, ನಾನು ಕೇಳಿದ್ದು ಕೇವಲ ಎಂಎಲ್ಎ ಟಿಕೆಟ್ ಅನ್ನು, ಅದನ್ನೇ ಕೊಟ್ಟಿಲ್ಲ. ಬಿಜೆಪಿ ಹೈಕಮಾಂಡ್‌ನವರೆಲ್ಲಾ ಯಾಕೆ ಹೀಗೆ ಮಾತಾಡ್ತಿದ್ದಾರೆ ಅಂತಾ ಅರ್ಥ ಮಾಡ್ಕೊಳ್ಳಿ ಎಂದು ಹೇಳಿ ರಿಚ್ಮಂಡ್ ಟೌನ್‌ನಲ್ಲಿರೊ ಸ್ಕೈ ಗಾರ್ಡನ್ಸ್ ಅಪಾರ್ಟ್ ಮೆಂಟ್ ಒಳಗೆ ಹೋದರು.

ಅಂದಹಾಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೆ ಸಮಯ ನಿಗದಿ ಮಾಡಲಾಗಿತ್ತು. ಇದಕ್ಕಾಗಿ ತರಾತುರಿಯಲ್ಲಿ ವಿಶೇಷ ವಿಮಾನದ ಮೂಲಕ ಜಗದೀಶ್‌ ಶೆಟ್ಟರ್ ಬೆಂಗಳೂರಿಗೆ ಆಗಮಿಸಿದರು. ಆದರೆ, ಕಾಂಗ್ರೆಸ್‌ ಸೇರುವ ಬಗ್ಗೆ ಇನ್ನೂ ಗೊಂದಲದಲ್ಲಿರುವಂತೆ ಕಾಣುತ್ತಿರುವ ಅವರು, ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮೂಲಕ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ನಿನ್ನೆ ರಾತ್ರಿ ಬಿಜೆಪಿಗೆ ರಾಜಿನಾಮೆ ಘೋಷಿಸಿದ್ದ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಶಿರಸಿಗೆ ತೆರಳಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಳಿ ರಾಜಿನಾಮೆಯನ್ನು ಸಲ್ಲಿಸಿದ್ದಾರೆ. ರಾಜಿನಾಮೆ ಸಲ್ಲಿಕೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಮನವೊಲಿಕೆಗೆ ಯತ್ನಿಸಲಾಯಿತು. ಅಮಿತ್ ಶಾ ಅವರಿಗೆ ಫೋನ್ ಮಾಡಿ, ಖುದ್ದು ಮನವೊಲಿಕೆಗೆ ಯತ್ನಿಸಲಾಯಿತು. ದೂರವಾಣಿ ಮೂಲಕ ಮಾತನಾಡಿದ ಬಳಿಕವೂ, ಒಪ್ಪದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಿನಾಮೆ ಪತ್ರ ಒಪ್ಪಿಸಿ ಹೊರಬಂದಿದ್ದರು.

ಇದನ್ನೂ ಓದಿ: Rahul Gandhi-Shah rukh Khan Audio : ರಾಹುಲ್ ಗಾಂಧಿ-ಶಾರುಖ್ ಖಾನ್ ಸಂಭಾಷಣೆ ಆಡಿಯೋ ವೈರಲ್! ಏನಿದೆ ಗೊತ್ತಾ ಅದರಲ್ಲಿ?