Home Karnataka State Politics Updates ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರದ ಆವರಣದಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಕಾಂಗ್ರೆಸ್‍ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡುತ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು ಅನ್ನೋದು ಹೆಚ್ಚಿನವರಿಗೆ ಗೊತ್ತಿಲ್ಲ. ಮೊದಲು ಬ್ರಿಟಿಷರ ಧ್ವಜ ಇತ್ತು. ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು, ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್‍ನಲ್ಲಿ ಮೂರನೇಯವರ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ, ಹೀಗೆಯೇ ಮುಂದುವರಿದರೆ ಹಿಂದೂ ಸಮಾಜ ಒಟ್ಟಾಗುತ್ತದೆ ಎಂದು ಪ್ರಭಾಕರ ಭಟ್ ಹೇಳಿದ್ದರು.

ಇದಕ್ಕಾಗಿ ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟರ ಬಂಧನ ಯಾವಾಗ ಎಂದು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

ಮಾನ್ಯ ಬೊಮ್ಮಾಯಿ ಅವರೇ, ದೇಶ ವಿರೋಧಿಗಳನ್ನು ಸಹಿಸುವುದಿಲ್ಲ ಎಂದು ಹೇಳಿಕೆ ಕೊಟ್ಟು ವೀರಾವೇಶ ಮೆರೆದಿದ್ದೀರಿ, ಸಂತೋಷ. ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ? ಆತನನ್ನು ಜೈಲಿಗಟ್ಟಿ ನಿಮ್ಮ ಹೇಳಿಕೆಗೆ ಬದ್ಧತೆ ತೋರಿಸಿ. ಹಾಗೆಯೇ ಈಶ್ವರಪ್ಪರ ರಾಜೀನಾಮೆ ಯಾವಾಗ ಪಡೆಯುವಿರಿ? ಎಂದು ಪ್ರಶ್ನಿಸಿದೆ