Home Karnataka State Politics Updates Karnataka Budget 2024: ಮೀನುಗಾರರ ಮುಖದಲ್ಲಿ ಸಂತಸ ತಂದ ಬಜೆಟ್‌; ಈ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Karnataka Budget 2024: ಮೀನುಗಾರರ ಮುಖದಲ್ಲಿ ಸಂತಸ ತಂದ ಬಜೆಟ್‌; ಈ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Karnataka budget 2024

Hindu neighbor gifts plot of land

Hindu neighbour gifts land to Muslim journalist

Karnataka Budget 2024: ರಾಜ್ಯದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ 3000 ಕೋಟಿ ರೂ.ಗಳಷ್ಟು ಬೃಹತ್‌ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಮಂಡನೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2024: ಬಜೆಟ್‌ನಲ್ಲಿ ಕ್ರಿಶ್ಚಿಯನ್‌, ಜೈನ ಸಮುದಾಯದವರಿಗೆ ಸಿಹಿ ಸುದ್ದಿ

ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ, ಆಕ್ವಾ ಪಾರ್ಕ್‌ಗಳ ಸ್ಥಾಪನೆ, ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರಬಂದರು ನಿರ್ಮಾಣ, ಹೊನ್ನಾವರ ತಾಲ್ಲೂಕಿನ ಮಂಕಿ/ಕಾಸರಕೋಡದಲ್ಲಿ ಮೀನುಗಾರಿಕಾ ಸಂಶೋಧನಾ ಕೇಂದ್ರ ಸ್ಥಾಪನೆ, ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಮುದ್ರ ಮೀನುಗಾರಿಕೆಗೆ ತೆರಳಿದ ಸಂದರ್ಭ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್‌ 7 ಕೋಟಿ ವೆಚ್ಚದಲ್ಲಿ ಖರೀದಿ ಮಾಡಲಾಗುವುದು, ಮತ್ಸ್ಯ ಆಶಾಕಿರಣ ಯೋಜನೆಯ ಮೂಲಕ ಮೀನುಗಾರರಿಗೆ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ನೀಡುವ ಪರಿಹಾರ ಮೊತ್ತ ರಾಜ್ಯದ ಪಾಲನ್ನು 1500 ರೂ. ಅನ್ನು 3000 ಕ್ಕೆ ಏರಿಸಲಾಗುವುದು.

16 ಮೀನು ಮರಿ ಉನ್ನತೀಕರಣವನ್ನು ನಬಾರ್ಡ್‌ ಉತ್ಪಾದನಾ ಕೇಂದ್ರಗಳ ಸಹಯೋಗದೊಂದಿಗೆ 20 ಕೋಟಿ ವೆಚ್ಚದಲ್ಲಿ ಮಾಡಲಾಗುವುದು, 10000 ವಸತಿ ರಹಿತ ಮೀನುಗಾರರಿಗೆ ರಾಜ್ಯ ಸರಕಾರದ ವಿವಿಧ ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು. ಆರು ಕೋಟಿ ವೆಚ್ಚದಲ್ಲಿ ಚಿತ್ರದುರ್ಗ, ಹೊಳಲ್ಕೆರೆ, ಹೊಸುದರ್ಗ ತಾಲ್ಲೂಕುಗಳಲ್ಲಿ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು ವೆಚ್ಚ ಮಾಡಲಾಗುವುದು ಎಂದು ಸಿಎಂ ಹೇಳಿದರು.