Home Karnataka State Politics Updates ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ’ರ ‘ಗೌರವಧನ’ ಹೆಚ್ಚಿಸಿ ಆದೇಶ

ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ’ರ ‘ಗೌರವಧನ’ ಹೆಚ್ಚಿಸಿ ಆದೇಶ

Hindu neighbor gifts plot of land

Hindu neighbour gifts land to Muslim journalist

ರಾಜ್ಯದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ್ದು ಈ ಸಂಬಂಧ ಆದೇಶ ಹೊರಡಿಸಿದೆ.

ಪಂಚಾಯತ್ ರಾಜ್ ಜನ ಪ್ರತಿನಿಧಿಗಳ ಮೂಲಕ ಚುನಾಯಿತರಾದ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಈ ಬಗ್ಗೆ ನಿರಂತರವಾಗಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದರು.

ಪಂಚಾಯತಿ ಸದಸ್ಯರಿಗೆ ಗೌರವಧನ ಒದಗಿಸಲು ಆರಂಭಿಕ ಹೋರಾಟ ಮಾಡಿದವರೇ ಕೋಟ ಶ್ರೀನಿವಾಸ ಪೂಜಾರಿಯವರು. ಬದಲಾದ ಕಾಲದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಈ ಸಂದರ್ಭದಲ್ಲಿ ಮತ್ತಷ್ಟು ಹೆಚ್ಚಿಸುವ ಭರವಸೆ ನೀಡಿದ್ದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು. ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6000, ಉಪಾಧ್ಯಕ್ಷರಿಗೆ 4000 ಹಾಗೂ ಸದಸ್ಯರಿಗೆ 2000 ರೂಪಾಯಿ ದೊರಕಿಸಿಕೊಡುವ ಬಗ್ಗೆ ತಿಳಿಸಿದೆ.