Home Karnataka State Politics Updates G Parameshwar: ಪೊಲೀಸ್‌ ಇಲಾಖೆ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್;‌ ಬೆಳ್ಳಂಬೆಳಗ್ಗೆ ಸಚಿವರು ನೀಡಿದ್ರು ಸಿಹಿ ಸುದ್ದಿ!

G Parameshwar: ಪೊಲೀಸ್‌ ಇಲಾಖೆ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್;‌ ಬೆಳ್ಳಂಬೆಳಗ್ಗೆ ಸಚಿವರು ನೀಡಿದ್ರು ಸಿಹಿ ಸುದ್ದಿ!

G Parameshwar
Image source- Times of india

Hindu neighbor gifts plot of land

Hindu neighbour gifts land to Muslim journalist

G Parameshwar: ಗೃಹ ಸಚಿವ ಡಾ.ಜಿ.ಪರಮೇಶ್ವರ್‌(G Parameshwar) ಅವರು ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಇನ್ನೆರಡು ವರ್ಷದಲ್ಲಿ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಈ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚೆ ಮಾಡಿದ್ದೇನೆ ಎಂದು, ಹಾಗೂ ಇದಕ್ಕೆ ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದನೆ ನೀಡಿದ್ದಾರೆ ಎಂದು ತಿಳಿಸಿದರು.

ಪೊಲೀಸ್‌ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಖಾಲಿ ಹುದ್ದೆ ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. 545 ಸಬ್‌ಇನ್‌ಸ್ಪೆಕ್ಟರ್‌ ನೇಮಕಾತಿ ಸಂದರ್ಭ ಏನೆಲ್ಲಾ ಆಗಿದೆ ಎಂದು ಎಲ್ಲರಿಗೂ ತಿಳಿದಿದೆ. ಈ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಒಂದು ಸಾವಿರಕ್ಕೂ ಹೆಚ್ಚು ಅಧಿಕ ಹುದ್ದೆಗಳು ಖಾಲಿ ಇದೆ. ಇಲಾಖೆಯಲ್ಲಿ ಈ ಹುದ್ದೆಗಳಿಗೆ ಬಡ್ತಿ ಕೊಡಲು ಅವಕಾಶವಿದ್ದು, 600 ಜನ ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ಗಳಾಗಿ ಬಡ್ತಿ ನೀಡಲಾಗಿದೆ. ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಅವರು ಹೇಳಿದರು.

ಕಳೆದ 4 ವರ್ಷದಿಂದ ಸರ್ಕಾರ ಪೊಲೀಸರ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಂಡಿಲ್ಲ. ಈ ಪರಿಣಾಮ ರಾಜ್ಯದಲ್ಲಿ 20 ಸಾವಿರ ಹುದ್ದೆಗಳು ಖಾಲಿ ಇವೆ. ವರ್ಷಕ್ಕೆ 4 ಸಾವಿರ ಮಂದಿ ಪೊಲೀಸರು ನಿವೃತ್ತರಾಗುತ್ತಾರೆ. ಈ ಹುದ್ದೆಗಳನ್ನಾದರೂ ತುಂಬುವ ಅವಶ್ಯಕತೆ ಇದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Earthquake: ನೇಪಾಳದಲ್ಲಿ ಭಾರೀ ಭೂಕಂಪ; 129 ಜನ ಸಾವು, ಅನೇಕ ಕಟ್ಟಡ ಕುಸಿತ!!!