Home Karnataka State Politics Updates CM Siddaramaiah: ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

CM Siddaramaiah: ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

CM Siddaramaiah

Hindu neighbor gifts plot of land

Hindu neighbour gifts land to Muslim journalist

CM Siddaramaiah: ಮೈಸೂರು : ವರುಣಾ ಕ್ಷೇತ್ರವನ್ನು ತಾಲೂಕು ಕೇಂದ್ರ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ (CM Siddaramaiah) ಆಗಮಿಸುತ್ತಿದ್ದಂತೆ ನಂಜನಗೂಡು ತಾಲೂಕಿನ ಸುತ್ತೂರು ಹೆಲಿಪ್ಯಾಡ್​ನಲ್ಲಿ ವರುಣವನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯ ಕೇಳಿ ಬಂದಿದೆ.

ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡುತ್ತೇವೆಎಂದು ಬೊಮ್ಮಾಯಿ ಕರ್ನಾಟಕ ವಿಧಾನ ಸಭೆ ಚುನಾವಣಾ ಸಂದರ್ಭದಲ್ಲಿ ಹೇಳಿದ್ದು ನಾನು ಹೇಳಿಲ್ಲ, ಜನರು ವರುಣವನ್ನು ತಾಲೂಕು ಮಾಡಿ ಎಂದು ಜನರು ಕೇಳಿದ್ರೆ ಮಾತ್ರ ಮಾಡೋದು ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ.

ಅಷ್ಟೇ ಅಲ್ಲದೇ ಇದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳ್ನು ಬಗ್ಗೆಯೂ ಮಾತನಾಡಿದ್ದು ನಾವು ನುಡಿದಂತೆ ನಡೆದಿದ್ಧೇವೆ. ನಾವು ಬಿಜೆಪಿಯವರಂತೆ ವಚನ ಭ್ರಷ್ಟರಲ್ಲ. 200 ಯೂನಿಟ್​​ವರೆಗೆ​ ಉಚಿತವಾಗಿ ವಿದ್ಯುತ್​ ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಗೆ 2,000 ಹಣ ನೀಡುತ್ತೇವೆ. ಬಿಪಿಎಲ್​, APL​ ಕಾರ್ಡ್​ ಇರುವ ಮಹಿಳೆಯರಿಗೆ ಯೋಜನೆ ಅನ್ವಯವಾಗುತ್ತದೆ. ವಿಧವಾ, ವೃದ್ಧಾಪ್ಯ ಪಿಂಚಣಿ ಪಡೆಯುವ ಮಹಿಳೆಗೂ ಯೋಜನೆ ಅನ್ವಯವಾಗುತ್ತದೆ. ಈ ಬಗ್ಗೆ ಯಾರೂ ಗೊಂದಲ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

 

ಇದನ್ನು ಓದಿ: ರೈತರಿಗೆ ಗುಡ್‌ ನ್ಯೂಸ್‌: ಎಮ್ಮೆಲೀಟರ್ ಹಾಲಿಗೆ 9.25 ರೂ. ನಿಗದಿಸಿದ ಕೆಎಂಎಫ್​​​