Home Karnataka State Politics Updates BJP High command: ಕರ್ನಾಟಕದತ್ತ ಒಲವು ಹರಿಸಿದ ಬಿಜೆಪಿ ಹೈಕಮಾಂಡ್​: ಓಬಿಸಿ ನಾಯಕರ ಜತೆ ಮಾಸ್ಟರ್...

BJP High command: ಕರ್ನಾಟಕದತ್ತ ಒಲವು ಹರಿಸಿದ ಬಿಜೆಪಿ ಹೈಕಮಾಂಡ್​: ಓಬಿಸಿ ನಾಯಕರ ಜತೆ ಮಾಸ್ಟರ್ ಪ್ಲಾನ್ ಗೆ ಸಿದ್ಧತೆ!

BJP High command

Hindu neighbor gifts plot of land

Hindu neighbour gifts land to Muslim journalist

BJP High command: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಆಯ್ಕೆ‌, ನೂತನ ರಾಜ್ಯಾಧ್ಯಕ್ಷರ ನೇಮಕ ವಿಳಂಬವಾಗುತ್ತಿದೆ ಎಂಬ ಆರೋಪದ ನಡುವೆ ಇದೀಗ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಹೌದು, ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದು, ಇದಕ್ಕೆ ಪೂರಕವೆಂಬಂತೆ ಕರ್ನಾಟಕದ ಓಬಿಸಿ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಮಹತ್ವದ ಮಾತುಕತೆ ನಡೆಸಿದೆ.

ಬಿಜೆಪಿ ಹೈಕಮಾಂಡ್ (BJP High command) ಸುಮಾರು 5 ತಿಂಗಳ ನಂತರ ರಾಜ್ಯದತ್ತ ಗಮನ ಹರಿಸಿದ್ದು, ಒಬಿಸಿ ನಾಯಕರೊಂದಿಗೆ ಬಿಜೆಪಿ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಹಿನ್ನೆಲೆ ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದ ಕೆ.ಎಸ್.ಈಶ್ವರಪ್ಪ, ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ.ಮೋಹನ್ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಸುಮಾರು ಒಂದೂವರೆ ಗಂಟೆ ಕಾಲ ಸಮಾಲೋಚನೆ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ನಡೆದ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಜಾತಿ ಗಣತಿ ಅಸ್ತ್ರದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೆ ತಿಂಗಳು ಸಿದ್ದವಾಗಲಿರುವ ಜಾತಿಗಣತಿ ವರದಿಯ ಸಾಧಕ ಬಾಧಕಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಮತ್ತು ಜಾತಿಗಣತಿಯಿಂದ ಒಬಿಸಿ ಸಮುದಾಯಕ್ಕೆ ಲಾಭ ಆಗುವುದರಿಂದ ರಾಜ್ಯದಲ್ಲಿ ಬಿಜೆಪಿ ನಿಲುವು ಏನಾಗಿರಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಮತ್ತು ನಾಯಕರಿಂದ ರಾಜ್ಯದ ರಾಜಕೀಯ ವಿದ್ಯಾಮಾನ ಹಾಗೂ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನು ಇದೇ ವೇಳೆ ಮುಂದೆ ಲೋಕಸಭಾ ಚುನಾವಣೆ ಬರುತ್ತಿರುವುದರಿಂದ ಓಬಿಸಿ ನಾಯಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಳ್ಯದ ವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿ ,ಅತ್ತೆ, ಮಾವ ಸೇರಿ ಐವರ ಬಂಧನ