

Yatindra Siddaramaiah: ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು, ಮುಖ್ಯಮಂತ್ರಿ ಆಗಿರುವ ವಿಚಾರ ಅಂತೂ ಎಲ್ಲರಿಗೂ ತಿಳಿದೇ ಇದೆ. ಆದರೆ ಮುಖ್ಯಮಂತ್ರಿ ಆದ ಬಳಿಕ ಅವರು ತಮ್ಮ ಕ್ಷೇತ್ರದತ್ತ ಹೆಚ್ಚು ಗಮನ ಕೊಡಲಾಗುತ್ತಿಲ್ಲ. ಹೀಗಾಗಿ ಅವರ ಮಗ ಯತೀಂದ್ರ ಅವರೇ ತಂದೆಯ ಜವಾಬ್ದಾರಿ ನೋಡಿಕೊಳ್ಳುತ್ತಿದ್ದಾರೆ. ಆದರೆ ಇದರೊಂದಿಗೆ ಅನೇಕ ಆಡಳಿತ ಕಾರ್ಯದಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆದರೀಗ ಈ ಬೆನ್ನಲ್ಲೇ ಅಪ್ಪ-ಮಗನ ಆಡಿಯೋ ಒಂದು ಸಾಕಷ್ಟು ವೈರಲ್ ಆಗುತ್ತಿದೆ.
ಹೌದು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆಯ ಜೊತೆ ಮಾತನಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ವರುಣಾ ಕ್ಷೇತ್ರದ ಕುರಿತು ಸಿದ್ದು ಮಗ ಯತೀಂದ್ರ ಅವರು ಜವಾಬ್ದಾರಿ ತೆಗೆದುಕೊಂಡು ತಾವೇ MLA ಅನ್ನೋ ರೀತಿಯಲ್ಲಿ ಇದು ಭಾಸವಾಗುತ್ತಿದೆ.
ಅಂದಹಾಗೆ ಬುಧವಾರ ಕ್ಷೇತ್ರದ ಜನರ ಅಹವಾಲು ಸ್ವೀಕರಿಸಲು ಬಂದ ಯತೀಂದ್ರ ಅವರು ಈ ವೇಳೆ ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ. ಬಳಿಕ ಅಪ್ಪ ಹೇಳಿ ಅಂತಾ ಮಾತು ಶುರುಮಾಡಿದ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ ಅವರಿಗೆ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ. ಮಹದೇವ್‌ಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನಿಸಿದ್ದಾರೆ. ನನಗೆ ಅದೆಲ್ಲಾ ಗೊತ್ತಿಲ್ಲ. ನಾನು ಕೊಟ್ಟಿರುವ ನಾಲ್ಕು, ಐದು ಮಾತ್ರ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಸದ್ಯ ಈ ವಿಚಾರವನ್ನೇ ಇಟ್ಟುಕೊಂಡು ಇದೀಗ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಅಪ್ಪ- ಮಗನ ಸರ್ಕಾರ ಎಂದು ಮೂದಲಿಸಿ ವ್ಯಂಗಾಯವಾಡಿವೆ. ಮಾಜಿ ಸಿಎಂ HD ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಹೆಚ್‌ಡಿಕೆ ಟ್ವೀಟ್‌ನಲ್ಲೇನಿದೆ?
ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ.
ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು? ಎಂದು ಹೇಳಿದ್ದಾರೆ.
https://www.facebook.com/reel/1079022343116062?sfnsn=wiwspwa&mibextid=XDzfc5
ಇದನ್ನೂ ಓದಿ: Bengaluru: ಬೆಂಗ್ಳೂರಲ್ಲಿ ಕಸ ಆಯುವವನಿಗೆ ಅಮೇರಿಕಾ ಡಾಲರ್ ಸಿಕ್ಕ ಪ್ರಕರಣಕ್ಕೆ ರೋಚಕ ಟ್ವಿಸ್ಟ್ !!













