Home Education Board Exam: 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ಪಬ್ಲಿಕ್‌ ಪರೀಕ್ಷೆ ರದ್ದುಪಡಿಸಿದ ಹೈಕೋರ್ಟ್‌; ಆದೇಶದ...

Board Exam: 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ಪಬ್ಲಿಕ್‌ ಪರೀಕ್ಷೆ ರದ್ದುಪಡಿಸಿದ ಹೈಕೋರ್ಟ್‌; ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಜ್ಜಾದ ಸರಕಾರ

Board Exam

Hindu neighbor gifts plot of land

Hindu neighbour gifts land to Muslim journalist

Board Exam: ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5,8.9 ಮತ್ತು 11 ನೇ ತರಗತಿ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ಕ್ರಮವನ್ನು ಹೈಕೋರ್ಟ್‌ ಏಕಸದಸ್ಯ ಪೀಠ ರದ್ದು ಮಾಡಿದ ಆದೇಶದ ಕುರಿತು ಮೇಲ್ಮನವಿ ಸಲ್ಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

ಇದನ್ನೂ ಓದಿ: Bengaluru Crime: 74 ಭ್ರೂಣ ಹತ್ಯೆ ಆರೋಪ : ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಮೇಲೆ ಪೊಲೀಸ್ ದಾಳಿ

ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ಧತೆ ಕೈಗೊಂಡಿರುವುದಾಗಿ ಹಾಗೂ ಮೇಲ್ಮನವಿ ಸಲ್ಲಿಸುವುದಾಗಿ ಹೇಳಲಾಗಿದೆ. ಪರೀಕ್ಷಾ ದಿನಾಂಕ ಸಮೀಪದಲ್ಲೇ ಇರುವುದರಿಂದ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಮೇಲ್ಮನವಿಯನ್ನು ಗುರುವಾರ ಸಲ್ಲಿಸಲಾಗುವುದು ಎಂದು ತಿಳಿದು ಬಂದಿದೆ.