Home Karnataka State Politics Updates CM Siddaramaiah: ಮಂಗಳೂರಿನಲ್ಲಿ ರಾಜ್ಯದ ದೊರೆ ಸಿದ್ದರಾಮಯ್ಯ ನೈತಿಕ ಪೊಲೀಸ್ ಗಿರಿ, ಸೌಜನ್ಯ ಕೇಸ್...

CM Siddaramaiah: ಮಂಗಳೂರಿನಲ್ಲಿ ರಾಜ್ಯದ ದೊರೆ ಸಿದ್ದರಾಮಯ್ಯ ನೈತಿಕ ಪೊಲೀಸ್ ಗಿರಿ, ಸೌಜನ್ಯ ಕೇಸ್ ಕುರಿತು ಹೇಳಿಕೆ

CM Siddaramaiah

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ಉಡುಪಿ ಕೇಸ್ ನಲ್ಲಿ ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ, ಡಿವೈಎಸ್ಪಿ ತನಿಖೆ ಆಗ್ತಿದೆ. ಅದು ಮೊದಲು ನಡೆಯಲಿ .ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ.ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುವ ಎಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರು ಏರ್ಪೋಟ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು. ಕಾಲೇಜ್‌ನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಹೋಂ ಮಿನಿಸ್ಟರ್ ಹೇಳಿರಬಹುದು. ಆದರೆ ಡಿವೈಎಸ್ಪಿ ಗಮನವಹಿಸಿ ಎಫ್‌ಐಆರ್ ಆಗಿ ತನಿಖೆ ನಡೆಯುತ್ತಿದೆ.ಡಿವೈಎಸ್ಪಿ ಲೆವೆಲ್ ತನಿಖೆ ಆಗ್ತಿರೋವಾಗ ಎಸ್ ಐಟಿ ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳಿದರು.

ಕರಾವಳಿಗೆ ಆಗಲೇ ಏನೇನು ಕೊಡಬಹುದು ಅಂತ ಹೇಳಿದ್ದೇವೆ. ಜುಲೈ ತಿಂಗಳ ಮಳೆ ಹಾನಿ ಬಗ್ಗೆ ಪರಿಶೀಲನೆಗೆ ಬಂದಿದ್ದೇನೆ.ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ.ಕಾನೂನು ಕೈಗೆತ್ತಿಕೊಳ್ಳಲು ಇಲ್ಲಿ ಯಾರಿಗೂ ಅವಕಾಶ ಇಲ್ಲ. ಪೊಲೀಸರಿಗೆ ಇದಕ್ಕೆ ಅವಕಾಶ ಕೊಡಬೇಡಿ ಅಂದಿದ್ದೇನೆ ಎಂದು ಹೇಳಿದರು.

ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು ಅವರ ಪೋಷಕರು ಮರು ತನಿಖೆಗೆ ಮನವಿ ಮಾಡಿದ್ದಾರೆ.ಕಾನೂನು ಪ್ರಕಾರ ಏನಾಗಬೇಕು ಅಂತ ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.ನಾನು ಲಾಯರ್ ಆಗಿ ಹೇಳೋದಾದ್ರೆ ಇದರ ಬಗ್ಗೆ ಹೈಕೋರ್ಟ್‌ ಗೆ ಅಪೀಲ್ ಹೋಗಬೇಕು. ನಾನು ಸಿಬಿಐ ಕೋರ್ಟ್ ಜಡ್ಜ್ ಮೆಂಟ್ ನೋಡಿಲ್ಲ. ಜಡ್ಜ್ ಮೆಂಟ್ ಓದಿ ನೋಡೇನೆ, ಅಪೀಲ್ ಗೆ ಅವಕಾಶ ಇದ್ಯಾ ನೋಡುತ್ತೇನೆ.ಅವರ ಪೋಷಕರು ಜಡ್ಜ್ ಮೆಂಟ್ ಕಾಪಿ ತಂದು ಕೊಟ್ಟಿದ್ದಾರೆ ಎಂದು ಹೇಳಿದರು.

ಸಾಮಾಜಿಕ ತಾಣಗಳಲ್ಲಿ ಸುಳ್ಳು ಸುದ್ದಿ ಮಾಡಿದ್ರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೆ ಕ್ರಮ ತೆಗೋಳಲ್ಲ, ಸುಳ್ಳು ಸುದ್ದಿಗೆ ಕ್ರಮ. ಫ್ಯಾಮಿಲಿ ಬಗ್ಗೆ ಹೇಳೋದು ಟೀಕೇನಾ? ಏನು ಬೇಕಾದರೂ ಹೇಳಬಹುದಾ?ಟೀಕೆ ಬೇರೆ, ಸುಳ್ಳು ಸುದ್ದಿ ಹಬ್ಬಿಸೋದು ಬೇರೆ. ವೈಯಕ್ತಿಕವಾಗಿ ತೇಜೋವಧೆ ಮಾಡೋದು ಕೂಡ ಬೇರೆ ಎಂದರು.

ಬಿಟ್ ಕಾಯಿನ್ ವಿಚಾರದಲ್ಲಿ ಎಸ್ ಐಟಿ ತನಿಖೆ ಆಗ್ತಿದೆ .ಅವರಿಗೆ ಸ್ವಾತಂತ್ರ್ಯ ಕೊಡಬೇಕು, ಅದು ಆಗ್ತಾ ಇದೆ ಎಂದು ಮಾಧ್ಯಮದವರ ಪ್ರಶ್ನೆಗೆ ಸಿಎಂ ಉತ್ತರಿಸಿದರು.