Home Karnataka State Politics Updates M P Renukacharya: ಕಟೀಲ್ ವಿರುದ್ಧ ಹರಿಹಾಯ್ದ ರೇಣುಕಾಚಾರ್ಯಗೆ ನೋಟಿಸ್ – ವಾರದೊಳಗೆ ಉತ್ತರಿಸುವಂತೆ ಬಿಜೆಪಿ...

M P Renukacharya: ಕಟೀಲ್ ವಿರುದ್ಧ ಹರಿಹಾಯ್ದ ರೇಣುಕಾಚಾರ್ಯಗೆ ನೋಟಿಸ್ – ವಾರದೊಳಗೆ ಉತ್ತರಿಸುವಂತೆ ಬಿಜೆಪಿ ಗಡುವು !!

M P Renukacharya
Image source- Oneindia kannada

Hindu neighbor gifts plot of land

Hindu neighbour gifts land to Muslim journalist

MP Renukacharya: ಬಿಜೆಪಿ(BJP) ರಾಜ್ಯಾಧ್ಯಕ್ಷರ ವಿರುದ್ಧ ಆರೋಪಗಳ ಸುರಿಮಳೆಗೈದು, ತೀವ್ರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ರೇಣುಕಾಚಾರ್ಯಗೆ (MP Renukacharya) ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ನೋಟಿಸ್ ನೀಡಿದೆ.

ಹೌದು, ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ(MP Renukacharya) ಅವರು ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌(Nalin Kumar kateel), ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಸೇರಿ ಹಲವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು. ಈಗ ರೇಣುಕಾಚಾರ್ಯ ಅವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ.

ಪಕ್ಷ ವಿರೋಧಿ ಹೇಳಿಕೆಗಳ ಕುರಿತು ಮಾಜಿ ಸಚಿವರಿಗೆ ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್ ನೀಡಿದ್ದಾರೆ. ಅಲ್ಲದೆ ಈ ನೋಟಿಸ್(Notice) ತಲುಪಿದ ಒಂದು ವಾರದೊಳಗಾಗಿ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಸೂಚಿಸಲಾಗಿದ್ದು, ಪಕ್ಷ ವಿರೋಧಿ ಹೇಳಿಕೆಗಳ ವಿಷಯಕ್ಕೆ ಸಂಬಂಧಿಸಿದಂತೆ ತಮಗೆ ಪಕ್ಷ ಸಾಕಷ್ಟು ಬಾರಿ ತಿಳಿ ಹೇಳಿದರೂ ಕೇಳುತ್ತಿಲ್ಲ. ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದೀರಿ. ಇದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟಿಸನ್ನು ನೀಡಲಾಗಿದೆ ಎಂದು ತಿಳಿಸಿದೆ.

ಅಂದಹಾಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly election) ಬಿಜೆಪಿ ಹೀನಾಯವಾಗಿ ಸೋಲುಂಡಿದ್ದು, ಸೋಲಿನ ಬಗ್ಗೆ ಪಕ್ಷದ ನಾಯಕರೊಳಗೇ ಅಪಸ್ವರಗಳು ಕೇಳಿ ಬರುತ್ತಿವೆ. ನಾಯಕರೂ ಒಬ್ಬರನ್ನೊಬ್ಬರು ದೂರಿಕೊಂಡು ಬೇಕಾಬಿಟ್ಟಿ ಹೇಳಿಕೆ ನೀಡುತ್ತಾ ನಾಲಗೆ ಹರಿಬಿಡುತ್ತಿದ್ದಾರೆ. ಸಾರ್ವಜನಿಕವಾಗಿಯೇ ಇದೆಲ್ಲದೂ ಆಗುತ್ತಿದ್ದು ಪಕ್ಷಕ್ಕೆ ಭಾರೀ ಮುಜುಗರ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್(Nalin Kumar kateel) ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಲು ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದ್ದರು. ಆದರೂ ಕೂಡ ಈ ಬೆನ್ನಲ್ಲೇ ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ರಾಜ್ಯಾಧ್ಯಕ್ಷರ ವಿರುದ್ಧವೇ ವಾಗ್ದಾಳಿ ನಡೆಸಿದ್ದರು.

ರೇಣುಕಾಚಾರ್ಯ ಹೇಳಿದ್ದೇನು?
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಆದ್ದರಿಂದ ಬಿಜೆಪಿ ರಾಜ್ಯಾಧ್ಯಕ್ಷರು (ನಳೀನ್‌ ಕುಮಾರ್‌ ಕಟೀಲ್‌) ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಸೋತಿರುವ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋಲಿನ ಬೆನ್ನಲ್ಲೇ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಬುಧವಾರ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆ. ಯಡಿಯೂರಪ್ಪನವರ ಪರವಾಗಿ ಮಾತನಾಡಿದರೆ ಅದು ಪಕ್ಷ ವಿರೋಧಿಯಾ? ಯಡಿಯೂರಪ್ಪ ನವರ ವಿರುದ್ಧವಾಗಿ ಮಾತನಾಡಿದರೆ ಅದು ಪಕ್ಷದ ಚಟುವಟಿಕೆಯಾ? ಎಂದು ಹೇಳಿದ್ದರು.

 

ಇದನ್ನು ಓದಿ: Anna bhagya Scheme: ಅನ್ನಭಾಗ್ಯದ ದುಡ್ಡು ಬೇಕಂದ್ರೆ ಇಂದೇ ಇದನ್ನು ಮಾಡಿ ! ಇಲ್ಲಾಂದ್ರೆ ದುಡ್ಡು ಇಲ್ಲ, ಅಕ್ಕಿಯೂ ಇಲ್ಲ.. !!