Home Karnataka State Politics Updates Sadananda Gowda: ‘ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು’ – ಈಶ್ವರಪ್ಪಗೆ ಸದಾನಂದ ಗೌಡ ಕೌಂಟರ್...

Sadananda Gowda: ‘ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು’ – ಈಶ್ವರಪ್ಪಗೆ ಸದಾನಂದ ಗೌಡ ಕೌಂಟರ್ !

Sadananda Gowda
image source: Daijiworld

Hindu neighbor gifts plot of land

Hindu neighbour gifts land to Muslim journalist

Sadananda Gowda: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ತಮ್ಮ ಪಕ್ಷಕ್ಕೆ ಎಳೆದಿದ್ದರಿಂದಲೇ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S. Ehswarappa) ಹೇಳಿದ್ದರು.

ಕಾಂಗ್ರೆಸ್ ನಾಯಕರು ಬಿಜೆಪಿ ಪಕ್ಷಕ್ಕೆ ಬಂದಿರೋದ್ರಿಂದ ಬಿಜೆಪಿ ಪಕ್ಷದಲ್ಲಿ ಕೆಲವೆಡೆ ಶಿಸ್ತು ಇಲ್ಲದಾಗಿದೆ. ಬಹಿರಂಗವಾಗಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿದೆ. ಇವೆಲ್ಲಾ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು ಎಂದು ಹೇಳಿದ್ದರು. ಇದೀಗ ಈಶ್ವರಪ್ಪ ಅವರ ಹೇಳಿಕೆಗೆ ಸದಾನಂದ ಗೌಡ (Sadananda Gowda) ಕೌಂಟರ್ ಕೊಟ್ಟಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್​ನಲ್ಲಿ ಹೊಂದಾಣಿಕೆ ಆಗಿದೆ. ಆದರೆ ಬಿಜೆಪಿ ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಆಗಿಲ್ಲ. ಪಕ್ಷಾಂತರವಾಗಿ ಬಂದವರಿಂದಲೇ ಬಿಜೆಪಿಯಲ್ಲಿ ಅಶಿಸ್ತು ತುಂಬಿದೆ. ಶಿಸ್ತು ಹೋಗಿದೆ ಎಂಬ ಮಾತನ್ನು ಒಪ್ಪಲಾಗುವುದಿಲ್ಲ. ನಮ್ಮ ಮನೆಗೆ ಬಂದ ಸೊಸೆಯನ್ನು ಮನೆಯವರಂತೆ ನೋಡಿಕೊಳ್ಳಬೇಕು ಎಂದು ಹೇಳುವ ಮೂಲಕ ಸದಾನಂದ ಗೌಡ ಈಶ್ವರಪ್ಪ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ.