Home Karnataka State Politics Updates V. Somanna : ‘ ನನಗಿಂತ ಬುದ್ಧಿವಂತರು ಸಿಕ್ಕರೆ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ’ –...

V. Somanna : ‘ ನನಗಿಂತ ಬುದ್ಧಿವಂತರು ಸಿಕ್ಕರೆ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ’ – ಪಕ್ಷಕ್ಕೆ ವಿ.ಸೋಮಣ್ಣ ಸವಾಲ್ !

Hindu neighbor gifts plot of land

Hindu neighbour gifts land to Muslim journalist

V. Somanna: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ‌. ಹಿರಿಯ ನಾಯಕ ವಿ ಸೋಮಣ್ಣ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಈ ಕುರಿತು ಕೇಂದ್ರ ನಾಯಕರಿಗೆ ಮನವಿಯೂ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ (Assembly election) ಎರಡೂ ಕ್ಷೇತ್ರಗಳಲ್ದಿ ಹೀನಾಯವಾಗಿ ಸೋಲನುಭವಿಸಿರುವ ಬಿಜೆಪಿ ನಾಯಕ ವಿ ಸೋಮಣ್ಣ (V. Somanna) ಅವರು ಬಿಜೆಪಿ(BJP) ರಾಜ್ಯಾಧ್ಯಕ್ಷ ಸ್ಥಾನ ನನಗೆ ಕೊಡಿಯೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ. ಇದೀಗ ‘ನನಗಿಂತ ಬುದ್ಧಿವಂತರು ಸಿಕ್ಕರೆ ಅವರನ್ನೇ ರಾಜ್ಯಾಧ್ಯಕ್ಷರ ಮಾಡಿ’ ಎಂದು ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ (Chamaraja nagar) ಹಾಗೂ ವರುಣಾ (Varuna) ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಸೋಲು ಕಂಡಿರುವ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡಿ, ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಕೇಂದ್ರ ನಾಯಕರಿಗೆ ಮನವಿ ಮಾಡಿದ್ದರು.

ಸದ್ಯ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸೋಮಣ್ಣ, ನಾನು ಸುಮ್ಮನೆ ಕೂತಿಲ್ಲ, ನಾನೂ ನಿದ್ದೆ ಮಾಡಲ್ಲ ಬೇರೆಯವರಿಗೂ ನಿದ್ದೆ ಮಾಡಲು ಬಿಡಲ್ಲ, ರಾಜ್ಯಾಧ್ಯಕ್ಷ ಸ್ಥಾನ ನನಗೆ ಕೊಡಿ ಎಂದು ಕೇಳಿದ್ದೇನೆ. ನನಗಿಂತ ಬುದ್ಧಿವಂತರು ಸಿಕ್ಕರೆ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಲಿ, ನನಗೆ ಆ ಅವಕಾಶ ಕೊಟ್ಟರೆ ನಿಭಾಯಿಸುತ್ತೇನೆ. ಇಲ್ಲವೇ ಪಕ್ಷ ಹೇಳುವ ಕೆಲಸ ಮಾಡಿಕೊಂಡಿರುತ್ತೇನೆ ಎಂದು ಹೇಳುವ ಮೂಲಕ ಸವಾಲ್ ಹಾಕಿದರು.

ಕಳೆದ 45 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನಾನು ಪಕ್ಷ ಹೇಳಿದ ಕೆಲಸ ಮಾಡಿದ್ದೇನೆ. ಎಂಥಹ ಸಂದರ್ಭದಲ್ಲೂ ವಿಚಲಿತನಾಗಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ನನಗೆ ಅವಕಾಶ ನೀಡಿದ್ರೆ ಗಾಂಭೀರ್ಯದಿಂದ ಕೆಲಸ ಮಾಡ್ತೇನೆ. ಇಲ್ಲದಿದ್ದರೆ ಬೇಸರ ಇಲ್ಲ. ಪಕ್ಷ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕು ಎಂದು ಸೋಮಣ್ಣ ಹೇಳಿದರು.