Home Karnataka State Politics Updates S L Bhairappa : ರಾಜ್ಯದಲ್ಲಿ ‘ಕಮಲ ಹೆಚ್ಟು ಅರಳಲ್ಲ’- ಲೋಕಸಭಾ ಫಲಿತಾಂಶದ ಬಗ್ಗೆ...

S L Bhairappa : ರಾಜ್ಯದಲ್ಲಿ ‘ಕಮಲ ಹೆಚ್ಟು ಅರಳಲ್ಲ’- ಲೋಕಸಭಾ ಫಲಿತಾಂಶದ ಬಗ್ಗೆ ಸಾಹಿತಿ ಎಸ್ ಎಲ್ ಭೈರಪ್ಪ ಅಚ್ಚರಿ ಭವಿಷ್ಯ !!

Hindu neighbor gifts plot of land

Hindu neighbour gifts land to Muslim journalist

S L Bairappa: ಲೋಕಸಭಾ ಚುನಾವಣೆಯ(Parliament Election)ಫಲಿತಾಂಶದ ಬಗ್ಗೆ ಇದುವರೆಗೂ ಮಠಾಧೀಶರುಗಳು, ಸ್ವಾಮಿಗಳು, ಜ್ಯೋತಿಷಿಗಳು ಹಾಗೂ ರಾಜಕಾರಣಿಗಳು ಭವಿಷ್ಯ ನುಡಿಯುವುದನ್ನು ನಾವು ಕೇಳುತ್ತಿದ್ದೆವು. ಆದರೆ ಈಗ ಕರ್ನಾಟಕದ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪನವರು(S L Bairappa)ಕೂಡ ಚುನಾವಣೆಯ ಫಲಿತಾಂಶದ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: Forest and Revenue Joint Survey: ಅರಣ್ಯ ಸುತ್ತ-ಮುತ್ತ ಕೃಷಿ ಮಾಡೋ ರೈತರಿಗೆ ಭೂಮಿ ಮಂಜೂರು ; ಸದ್ಯದಲ್ಲೇ ಈ ಜಿಲ್ಲೆಗಳ ರೈತರಿಗೆ ಹಕ್ಕು ಪತ್ರ ವಿತರಣೆ !!

ಹೌದು, ಕರ್ನಾಟಕದಲ್ಲಿ ಬಿಜೆಪಿ(BJP) ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರು ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ(PM Modi)ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. ಅದು ನಿಶ್ಚಿತ. ಆದರೆ, ಓಟುಗಳು ತುಂಬಾ ಒಡೆದು ಹೋಗುತ್ತೆ. ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಗೆಲ್ಲೋದು ಅರ್ಧದಷ್ಟು ಮಾತ್ರ! ರಾಜ್ಯದಲ್ಲಿ ಕಮಲ ಹೆಚ್ಚು ಸ್ಥಾನಗಳನ್ನು ಗೆಲ್ಲೋದು ಕಷ್ಟ” ಎಂದು ಅಚ್ಚರಿ ಮೂಡಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಕರ್ನಾಟಕದಲ್ಲಿ ಕಮಲ ಬಹಳ ವೀಕ್ ಆಗಿದೆ. ಉತ್ತರಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದಿದ್ದರೇ ಹೆಚ್ಚಿನ ಸೀಟು ಗೆಲ್ಲಬಹುದಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇರಲಿಲ್ಲ. ಬೇಕಾಬಿಟ್ಟಿ ಆಡಳಿತ ನಡೆಸಿದರು. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಅವರಿಗೆ ಅಧಿಕಾರಿಗಳ ಮೇಲೆ ಹಿಡಿತವಿದೆ. ಆದರೆ ಹೋಗುವ ದಾರಿ ಸರಿಯಿಲ್ಲ, ಉಚಿತ ವ್ಯವಸ್ಥೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಅದೇ ಕಾರಣದಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿತು. ಆದರೀಗ ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತವಿದೆ. ಈ ಬಾರಿಯ ಚುನಾವಣೆಯಲ್ಲಿ ಮೋದಿ ಅಲೆ ಕಡಿಮೆ ಆಗಿದೆಯಾ ಎಂಬುದು ಗೊತ್ತಿಲ್ಲ” ಎಂದರು.