Home Karnataka State Politics Updates Belthangady: ಅಧಿಕಾರಿಗಳ ಮೇಲೆ ಅಸಂಸದೀಯ ಪದ ಬಳಕೆ – ಶಾಸಕ ಹರೀಶ್ ಪೂಂಜ ಸಹಿತ...

Belthangady: ಅಧಿಕಾರಿಗಳ ಮೇಲೆ ಅಸಂಸದೀಯ ಪದ ಬಳಕೆ – ಶಾಸಕ ಹರೀಶ್ ಪೂಂಜ ಸಹಿತ 11 ಮಂದಿ ಮೇಲೆ ಪ್ರಕರಣ ದಾಖಲು!!!

Belthangady
Image source: The Hans india

Hindu neighbor gifts plot of land

Hindu neighbour gifts land to Muslim journalist

Belthangady: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನುವ ಆರೋಪದ ಮೇಲೆ ಈ ಪ್ರಕರಣ ದಾಖಲು ಮಾಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಾಗ ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಕುರಿತು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್‌ ಕೆ ಕೆ ಅವರು ನೀಡಿದ ದೂರಿನ ಮೇಲೆ ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದ್ದು, ಮನೆ ತೆರವಿನ ಸಂದರ್ಭ ವಾಗ್ವಾದ ನಡೆದಿತ್ತು. ಈ ಘಟನೆಯ ವೀಡಿಯೋ ವೈರಲ್‌ ಆಗಿತ್ತು.

ಘಟನೆ ವಿವರ: ಕಳೆಂಜ ಗ್ರಾಮದ ಅಮ್ಮಿಡ್ಕ ಕುದ್ದಮನೆ ಸೇಸ ಗೌಡ ಎಂಬುವವರ ಕುಟುಂಬವು 150 ವರ್ಷದ ಹಿಂದೆ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ಅ.6 ರಂದು ಅರಣ್ಯ ಇಲಾಖೆ ಬಡ ಕುಟುಂಬದ ಫೌಂಡೇಶನ್‌ ಕಿತ್ತೆಸೆದಿದೆ. ಇದರಿಂದ ನೊಂದ ಮನೆ ಮಗ ನೊಂದು ಆತ್ಮಹತ್ಯೆಗೆ ಮುಂದಾಗಿದ್ದರು.

ನಂತರ ಸ್ಥಳಕ್ಕೆ ಬಂದ ಶಾಸಕ ಹರೀಶ್‌ ಪೂಂಜ ಅವರು ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಅರಣ್ಯ ಇಲಾಖೆ ಮತ್ತು ಶಾಸಕರ ಮಧ್ಯೆ ಗಂಭೀರ ಮಾತಿನ ಚಕಮಕಿ ನಡೆಯಿತು. ನಂತರ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರಿಗೆ ಕರೆ ಮಾಡಿದ ಹರೀಶ್ ಪೂಂಜಾ ಸಮಸ್ಯೆ ಬಗ್ಗೆ ಹೇಳಿದ್ದು, ಸಚಿವರು ಸದ್ಯ ತೆರವುಗೊಳಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಮೇಲಾಧಿಕಾರಿಗಳಿಂದ ವರದಿ ಪಡೆದು ಬಳಿಕ ನಿರ್ಧಾರ ಕೈಗೊಳ್ಳಲು ಆದೇಶ ನೀಡಿದ್ದರು. ಅನಂತರ ಈ ಘಟನೆಯ ಕುರಿತು ಅರಣ್ಯ ಇಲಾಖೆಗೆ ಸೇರಿದ ಜಾಗಕ್ಕೆ  ಅ.7 ರಂದು ಅಕ್ರಮವಾಗಿ ಮನೆ ನಿರ್ಮಾಣ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 11 ಜನರ ವಿರುದ್ಧ ಅ.7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.

ಆದರೆ ಮತ್ತೊಮ್ಮೆ ಬೆಳ್ಳಂಬೆಳಗ್ಗೆ ಘಟನಾ ಸ್ಥಳಕ್ಕೆ ಪುನಃ ಏಕಾಏಕಿ ಮನೆ ತೆರವಿಗೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳ ಮಧ್ಯೆ ಹರೀಶ್‌ ಪೂಂಜಾ ಹಾಗೂ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಅಸಂಸದೀಯ ಪದ ಬಳಸಿ ನಿಂದಿಸಿರುವ ಬಗ್ಗೆ ಅಕ್ಟೋಬರ್ 13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನು ಓದಿ: ಜೆ.ಡಿ.ಎಸ್.ನಿಂದ ಹೆಚ್.ಡಿ.ಕುಮಾರಸ್ವಾಮಿ ,ನಿಖಿಲ್ ಉಚ್ಚಾಟನೆ