Home Karnataka State Politics Updates Congress government : ಕಾಂಗ್ರೆಸ್ ಡಿಸಿಎಂ ಹುದ್ದೆಯಲ್ಲಿ ಮಹತ್ವದ ಬದಲಾವಣೆ ?! ರಾಜ್ಯ ಸರ್ಕಾರದಲ್ಲಿ...

Congress government : ಕಾಂಗ್ರೆಸ್ ಡಿಸಿಎಂ ಹುದ್ದೆಯಲ್ಲಿ ಮಹತ್ವದ ಬದಲಾವಣೆ ?! ರಾಜ್ಯ ಸರ್ಕಾರದಲ್ಲಿ ಏನಿದು ಮಹತ್ವದ ಹೊಸ ಬೆಳವಣಿಗೆ ?

Hindu neighbor gifts plot of land

Hindu neighbour gifts land to Muslim journalist

Congress government : ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ(Assembly election)ಗೆದ್ದು ಭೀಗಿದ ಕಾಂಗ್ರೆಸ್ ಸಿಎಂ ಆಯ್ಕೆ ವಿಚಾರದಲ್ಲಿ ಸಾಕಷ್ಟು ಕಸರತ್ತು ನಡೆಸಿತ್ತು. ಕೊನೆಗೆ ಸಿಎಂ ಆಕಾಂಕ್ಷಿ ಆದ ಡಿ ಕೆ ಶಿವಕುಮಾರ್(D K Shivkumar) ಅವರಿಗೆ ಉಪಮುಖ್ಯಮಂತ್ರಿ ಪಟ್ಟ ಕಟ್ಟಿ, ಒಂದೇ ಒಂದು ಡಿಸಿಎಂ(DCM) ಸ್ಥಾನ ಇರುತ್ತದೆ ಎಂಬುದನ್ನೂ ಘೋಷಣೆ ಮಾಡಿ ಕೊನೆಗೆ ಹೇಗೋ ನೂತನ ಸರ್ಕಾರ ರಚನೆ ಮಾಡಿಯೇ ಬಿಟ್ಟಿತು. ಆದರೀಗ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕೋರಿ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆಯಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ(K N Rajanna) ಹೇಳಿದ್ದಾರೆ.

ಹೌದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ. ಇದಕ್ಕೆ ಎಲ್ಲ ಸಮುದಾಯಗಳ ಬೆಂಬಲ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್‌ ಕೋರುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೂರು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳನ್ನು ಸೃಷ್ಟಿ ಮಾಡಿದರೆ, ಎಲ್ಲಾ ಸಮುದಾಯಗಳು ನಮ್ಮ‌ಗೆ ಬೆಂಬಲ ನೀಡಲು ಅನುಕೂಲ ಆಗುತ್ತೆದೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ.

ಅಂದಹಾಗೆ ತುಮಕೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಮ್ಮ ಮನೆ‌ ಹೊಸ್ತಿಲಲ್ಲಿ ಬಂದು ನಿಂತಿದೆ. ಎಲ್ಲಾ ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ. ಕಾಂಗ್ರೆಸ್ ರಾಜ್ಯದಲ್ಲಿ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು. ನಾವು ಗೆಲ್ಲುತ್ತೇವೆ ಅನ್ನೋ ವಿಶ್ವಾಸವಿದೆ. ಮೂರು ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿದ್ರೆ, ಎಲ್ಲ ಸಮುದಾಯಗಳು ನಮಗೆ ಬೆಂಬಲ ನೀಡಲು ಅನುಕೂಲ ಆಗುತ್ತೆ. ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರಿಗೆ, ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಸೃಷ್ಟಿ ಮಾಡಬೇಕು ಎಂದರು.

ಇಷ್ಟೇ ಅಲ್ಲದೆ ಪರಿಶಿಷ್ಟ ಜಾತಿ-ಪಂಗಡ, ವೀರಸೈವ-ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯದಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಹೈಕಮಾಂಡ್​ಗೆ ಮನವಿ ಸಲ್ಲಿಸಲಾಗುವುದು. ಈ ವಿಚಾರವಾಗಿ ಅಕ್ಟೋಬರ್​ ಮೊದಲ ವಾರದಲ್ಲಿ ಹೈಕಮಾಂಡ್​ ಭೇಟಿ ಮಾಡಿ ಮನವರಿಕೆ ಮಾಡಲಾಗುವುದು. ಈ ವಿಚಾರಕ್ಕೆ ಸಹಮತ ವ್ಯಕ್ತಪಡಿಸಿರುವ ಮುಖಂಡರ ನಿಯೋಗವನ್ನು ಹೈಕಮಾಂಡ್​ ಬಳಿಗೆ ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ.

ರಾಜಣ್ಣ ಹೇಳಿದ ಮಾತಲ್ಲಿ ತಪ್ಪೇನಿದೆ? – ಡಾ. ಪರಮೇಶ್ವರ್:
ಮೂರು ಡಿಸಿಎಂ ಸ್ಥಾನ ನೀಡಬೇಕು ಎಂಬ ಸಚಿವ ರಾಜಣ್ಣ ಮಾತನ್ನ ಗೃಹ ಸಚಿವ ಡಾ. ಜಿ.ಪರಮೇಶ್ವರ್ (G.Parameshwar) ಸಹ ಸಮರ್ಥಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಜಣ್ಣ ಕೇಳೋದ್ರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ. ಸಿಎಂಗೂ ಹೈಕಮಾಂಡ್‌ಗೂ ಅವರೇ ತಿಳಿಸಬೇಕು. ಅವರ ವೈಯಕ್ತಿಕ ಅಭಿಪ್ರಾಯ, ಅವರ ಅನಿಸಿಕೆ ಬಗ್ಗೆ ಅವರೇ ಹೇಳಬೇಕು. ಡಿಸಿಎಂ ಮಾಡಬೇಕು ಎಂಬ ಅವರ ಉದ್ದೇಶ ಒಳ್ಳೆಯದೆ. ಲೋಕಸಭೆ ಚುನಾವಣೆ ಮುಂಚೆ ಸಮುದಾಯಗಳಿಗೆ ಡಿಸಿಎಂ ಮಾಡಬೇಕು ಅಂತ ರಾಜಣ್ಣ ಹೇಳಿದ್ದಾರೆ. ತೀರ್ಮಾನ ಮಾಡುವವರು ಬಿಡುವವರು ಎಐಸಿಸಿ ನಾಯಕರು. ಡಿಸಿಎಂ ಸ್ಥಾನ ಮಾಡುವ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿರುವುದು ಎಂದಿದ್ದಾರೆ.