Home Karnataka State Politics Updates ಸಚಿವ ಉಮೇಶ್ ಕತ್ತಿ ವಿಧಿವಶ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

ಸಚಿವ ಉಮೇಶ್ ಕತ್ತಿ ವಿಧಿವಶ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

Hindu neighbor gifts plot of land

Hindu neighbour gifts land to Muslim journalist

ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಗೊಂಡು ಎಂ ಎಸ್ ರಾಮಯ್ಯ ಹಾಸ್ಪಿಟಲ್ ನಲ್ಲಿ ನಿಧನ ಹೊಂದಿದ್ದಾರೆ. ಉಮೇಶ್ ಕತ್ತಿ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲಿಸಿ ನೇರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ದಿನಾಂಕ 07-09-2022 ರ ಇಂದು ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.

ಇನ್ನು ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ರಜೆಯನ್ನು ಘೋಷಣೆ ಮಾಡಲಾಗಿದೆ.