

MLA Balakrishna: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂಬ ವಿಚಾರ ಭಾರಿ ಸದ್ದು ಮಾಡುತ್ತಿದೆ ಈ ಕುರಿತು ಬಿಜೆಪಿ ಕೂಡ ಹಲವಾರು ರೀತಿಯಲ್ಲಿ ಪ್ರಚಾರವನ್ನು ಕೈಗೊಳ್ಳುತ್ತಿದೆ. ಆದರೆ ಈಗ ಈ ಕುರಿತು ಸ್ವತಃ ಕಾಂಗ್ರೆಸ್ ಶಾಸಕ ಬಾಲಕೃಷ್ಣ(MLA Balakrishna) ನಾಡಿನ ಜನತೆಗೆ ಎಚ್ಚರಿಕೆ ನೀಡಿದ್ದಾರೆ.

ಹೌದು, ಮಾಡಗಿ(Magadi) ತಾಲ್ಲೂಕಿನಲ್ಲಿ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಮಾಗಡಿ ಶಾಸಕ ಹೆಚ್.ಡಿ. ಬಾಲಕೃಷ್ಣ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುವುದು. ಆದ್ದರಿಂದ ನೀವು ಡಿ.ಕೆ.ಸುರೇಶ್(D K Suresh)ಅವರಿಗೆ ಮತ ನೀಡಬೇಕು ಎಂದು ಜನರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.
ಅಲ್ಲದೆ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ರಾಜ್ಯದಿಂದ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನಗಳನ್ನು ನೀಡಿ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಒಂದ ವೇಳೆ ಮತ ನೀಡದಿದ್ರೆ ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುತ್ತದೆ. ಆದ್ದರಿಂದ ನೀವು ಸಂಸದ ಡಿ.ಕೆ ಸುರೇಶ್ ಪರ ಮತ ನೀಡಬೇಕು ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.













