Home Karnataka State Politics Updates Mangaluru: ಮೂಡುಶೆಡ್ಡೆ ಗಲಾಟೆ ಪರಿಣಾಮ ಐದು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ ವಿಸ್ತರಣೆ!!

Mangaluru: ಮೂಡುಶೆಡ್ಡೆ ಗಲಾಟೆ ಪರಿಣಾಮ ಐದು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ ವಿಸ್ತರಣೆ!!

Mangaluru
Source: headlinekarnataka

Hindu neighbor gifts plot of land

Hindu neighbour gifts land to Muslim journalist

Moodushedde Mithun Rai case: ಬುಧವಾರ ಮತದಾನ ಮುಗಿದ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ (Moodushedde Mithun Rai case) ಕಾಂಗ್ರೆಸ್ (congress) ಮತ್ತು ಬಿಜೆಪಿ (bjp) ತಂಡಗಳ ನಡುವೆ ಘರ್ಷಣೆ ಸಂಭವಿಸಿದ್ದು, ಈ ಹಿನ್ನೆಲೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮತ್ತೆ ನಾಲ್ಕು ಠಾಣೆಗಳ ವ್ಯಾಪ್ತಿಗೆ 144 ಸಕ್ಷನ್ ವಿಸ್ತರಣೆ ಮಾಡಿದ್ದಾರೆ.

ನಿನ್ನೆ ರಾತ್ರಿ ಮಂಗಳೂರು (Mangaluru) ಹೊರವಲಯದ ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೇಸ್ ತಂಡಗಳ ಮಧ್ಯೆ ಘರ್ಷಣೆ ಸಂಭವಿಸಿದ್ದು, ಗಲಾಟೆಯ ಹಿನ್ನೆಲೆ ಮತ ಎಣಿಕೆ ಸಂದರ್ಭದಲ್ಲಿ ಈ ರೀತಿಯ ಅಹಿತಕರ ಘಟನೆ ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಕಾವೂರು, ಬಜೈ ಕಂಕನಾಡಿ ಗ್ರಾಮಾಂತರ, ಮೂಡುಬಿದ್ರೆ, ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ ವಿಸ್ತರಣೆ ಮಾಡಲಾಗಿದೆ.

ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14ರ ಬೆಳಗ್ಗೆ 6ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಆದೇಶ ಹೊರಡಿಸಿದ್ದರು.

ಆದರೆ, ನಿನ್ನೆ ಸಂಜೆ ಮೂಡುಶೆಡ್ಡೆಯಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮಿಥುನ್​ ರೈ (Mithun Rai) ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಐದು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಈ ರೀತಿ ಆಗಬಾರದು ಎಂಬ ಉದ್ದೇಶದಿಂದ ಮಾಡಲಾಗಿದೆ.

ಇದನ್ನೂ ಓದಿ:No-Car Policy: ಪ್ರಪಂಚದ ಈ ಸ್ಥಳಗಳಲ್ಲಿ ಕಾರುಗಳಿಗೆ ಪ್ರವೇಶವಿಲ್ಲ ; ಯಾಕೆ?!