Home Karnataka State Politics Updates ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ಹೇಳಿ ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ

ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ಹೇಳಿ ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ

Hindu neighbor gifts plot of land

Hindu neighbour gifts land to Muslim journalist

ನಳೀನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ, ಕಟೀಲ್ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಗೆ ಬಡ್ತಿ ನೀಡುವ ಪಕ್ಷ ಕಾಂಗ್ರೆಸ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ನಾವು A ಟೀಂ ಅಲ್ಲ B ಟೀಂ ಕೂಡ ಅಲ್ಲ ಎಂಬ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಮತ್ತೆ ಎಲ್ಲಾ ಕಡೆ ಯಾಕೆ ಅಭ್ಯರ್ಥಿ ಹಾಕಿಲ್ಲ. ಉಳಿದ ಕಡೆಗಳಲ್ಲಿ ಈಗ ಏನೂ ಮಾಡುತ್ತಾರೆ. ಪರಿಷತ್​ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಬಿಜೆಪಿಯ ಬಿ ಟೀಂ ಎಂದು ಟೀಕಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿರುವ ಬಿಎಸ್‍ವೈ ಹೇಳಿಕೆಗೆ ಟಾಂಗ್ ನೀಡಿದ್ದೂ, ಬಿಎಸ್‍ವೈ ಅವರ ಜೇಬಿನಲ್ಲಿ ಮತಗಳು ಇವೆಯೇ? ಈ ರಾಜ್ಯದ ಜನ ಬಿಜೆಪಿ ಕಿತ್ತೊಗೆಯಲು ತೀರ್ಮಾನಿಸಿದ್ದಾರೆಂದು ತಿರುಗೇಟು ನೀಡಿದರು.

KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಹ ಕಟೀಲ್​​ ಹೇಳಿಕೆ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಅವನು ಹೇಳಿರುವ ಮಾತಿಗೆ ಉತ್ತರ ಇಲ್ಲ, ಅವನು ಅಸಂಬದ್ಧ ಹೇಳುತ್ತಾನೆ. ಬೆಳಗಾವಿ ಫೈಟ್ ವಿಚಾರಕ್ಕೆ ನಮ್ಮದು ಕಾಂಗ್ರೆಸ್ ಪಕ್ಷ, ಅವರದ್ದು ಬಿಜೆಪಿ ಪಕ್ಷ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಬಿಜೆಪಿಯಲ್ಲಿ ಗೊಂದಲ ಇದೆ. ಬಿಜೆಪಿಯಲ್ಲಿ ಒಬ್ಬ ಅಭ್ಯರ್ಥಿ ಅಧಿಕೃತ, ಒಬ್ಬ ಅನಧಿಕೃತ ಅಭ್ಯರ್ಥಿ ಇದ್ದಾರೆ ಎಂದರು. ಇನ್ನು ಸೋದರ ಲಖನ್​ ಜಾರಕಿಹೊಳಿ ಸ್ಪರ್ಧೆ ಸಂಬಂಧ ಕುಟುಂಬಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ಸತೀಶ್​ ಜಾರಕಿಹೊಳಿ ಸ್ಪಷ್ಟನೆ ನೀಡಿದರು.