Home Karnataka State Politics Updates Bihar Election : ಬಿಹಾರಕ್ಕೆ CM ಅಭ್ಯರ್ಥಿ ಘೋಷಿಸಿದ NDA !!

Bihar Election : ಬಿಹಾರಕ್ಕೆ CM ಅಭ್ಯರ್ಥಿ ಘೋಷಿಸಿದ NDA !!

Hindu neighbor gifts plot of land

Hindu neighbour gifts land to Muslim journalist

 

Bihar Election : ಬಿಹಾರ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇತ್ತೀಚಿಗಷ್ಟೇ ಇಂಡಿಯಾ ಮೈತ್ರಿಕೂಟವು ತೇಜಸ್ವಿ ಯಾದವ್ ಅವರನ್ನು ಬಿಹಾರದ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ NDA ಮೈತ್ರಿಕೂಟವು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಕೊಂಡಿದೆ.

 

ಹೌದು, ಬಿಹಾರ ವಿಧಾನಸಭಾ ಚುನಾವಣೆಗೆ (Bihar Elections 2025) ಕೆಲವೇ ವಾರಗಳು ಬಾಕಿ ಇದೆ. ಹೀಗಾಗಿ, ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನೇತೃತ್ವದ ಎನ್​ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಅವರ ಹೆಸರನ್ನು ಅನುಮೋದಿಸಿದ್ದಾರೆ.

 

 ಬಳಿಕ ಮಾತನಾಡಿದ ಪ್ರಧಾನಿಯವರು “ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟವು ಹಿಂದಿನ ಎಲ್ಲಾ ಚುನಾವಣೆಗಳ ದಾಖಲೆಗಳನ್ನು ಮುರಿಯಲಿದೆ. ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ರಾಜ್ಯವನ್ನು ಸಮೃದ್ಧಗೊಳಿಸಿದೆ ಎಂದು ಹೇಳಿದರು.