Home Karnataka State Politics Updates Priyank Kharge: ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆ ನಿಷೇಧ! ಒಪ್ಪಿಕೊಳ್ಳದವರು ಪಾಕಿಸ್ತಾನಕ್ಕೆ ಹೋಗಬಹುದು: ಪ್ರಿಯಾಂಕ್...

Priyank Kharge: ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆ ನಿಷೇಧ! ಒಪ್ಪಿಕೊಳ್ಳದವರು ಪಾಕಿಸ್ತಾನಕ್ಕೆ ಹೋಗಬಹುದು: ಪ್ರಿಯಾಂಕ್ ಖರ್ಗೆ

Bajrang Dal

Hindu neighbor gifts plot of land

Hindu neighbour gifts land to Muslim journalist

Bajrang Dal: ಸರ್ಕಾರವು ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಪ್ರಿಯಾಂಕ್ ಎಂದಿದ್ದಾರೆ.

ಇನ್ನು ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದ್ದು, ಈ ಮೊದಲು ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಕೃತ್ಯಗಳು ಮುಕ್ತವಾಗಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.

2023 ರ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ಬಿಜೆಪಿ ಪಕ್ಷವನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು.

ಮುಖ್ಯವಾಗಿ ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದ್ದು, ಪ್ರಿಯಾಂಕ್ ಖರ್ಗೆ ಪ್ರಕಾರ, ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ (Bajrang Dal) ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ ಎಂದು ನೇರವಾಗಿ ಜನರಿಗೆ ತಿಳಿಸಿದ್ದಾರೆ.

 

ಇದನ್ನು ಓದಿ: DK Suresh – MB Patil: ಸಿದ್ದು- ಡಿಕೆಶಿ ಬಣಗಳ ಮುಸುಕಿನ ಗುದ್ದಾಟ: ವಿಧಾನಸೌಧದಲ್ಲಿ ಎಂಬಿ ಪಾಟೀಲ್‌ ಡಿಕೆ ಸುರೇಶ್‌ ಗುರ್ರ್ ಗುರ್ರ್ ಗುರಾಯಿಸಿದ್ರು !