Home Karnataka State Politics Updates Parliament election: ರಾಜ್ಯದಲ್ಲಿ ಉಳಿದ 8ರ ಪೈಕಿ ಈ 5 ಕ್ಷೇತ್ರಗಳ ಹಾಲಿ ಸಂಸದರಿಗೂ ಬಿಜೆಪಿ...

Parliament election: ರಾಜ್ಯದಲ್ಲಿ ಉಳಿದ 8ರ ಪೈಕಿ ಈ 5 ಕ್ಷೇತ್ರಗಳ ಹಾಲಿ ಸಂಸದರಿಗೂ ಬಿಜೆಪಿ ಟಿಕೆಟ್ ಮಿಸ್ !!

Parliament Election

Hindu neighbor gifts plot of land

Hindu neighbour gifts land to Muslim journalist

Parliment electionಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು ಕರ್ನಾಟಕದ 20ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಿದೆ. ಆದರೆ ಕೆಲವು ಕ್ಷೇತ್ರಗಳಿಗೆ ಬಿಜೆಪಿಯು ಅಚ್ಚರಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಬೆನ್ನಲ್ಲೇ ಇನ್ನುಳಿದ 8ರ ಪೈಕಿ ಈ 5ಕ್ಷೇತ್ರಗಳ ಹಾಲಿ ಸಂಸದರಿಗೂ ಬಿಜೆಪಿ ಟಿಕೆಟ್ ಮಿಸ್ ಆಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಹೌದು, ಈಗಾಗಲೇ ಬಿಜೆಪಿ(BJP)ಯಿಂದ 20ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಆಗಿದೆ. ಇನ್ನುಳಿದ 8 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಾದ ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲಾಗಲಿದ್ದು ಬಾಕಿ ಉಳಿದ ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ರಾಯಚೂರು, ಉತ್ತರ ಕನ್ನಡದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ.

• ಚಿತ್ರದುರ್ಗ: ಚಿತ್ರದುರ್ಗದಿಂದ ಕೇಂದ್ರ ಸಚಿವ ಹಾಲಿ ಸಂಸದ ಎ.ನಾರಯಣಸ್ವಾಮಿ ಚುನಾವಣೆ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ.
• ಬೆಳಗಾವಿ: ಬೆಳಗಾವಿಯಲ್ಲಿ ಸದ್ಯ ಮಂಗಳಾ ಅಂಗಡಿ (mangala Angadi) ಸಂಸದೆಯಾಗಿದ್ದಾರೆ. ಪತಿ ಸುರೇಶ್ ಅಂಗಡಿ (Suresh Angadi) ನಿಧನ ಹಿನ್ನೆಲೆ‌ ಮಂಗಳಾ ಅಂಗಡಿಗೆ ಟಿಕೆಟ್ ನೀಡಲಾಗಿತ್ತು. ಆದರೀಗ ಈ ಭಾರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ಎನ್ನಲಾಗಿದೆ. ಮಹಾಂತೇಶ್ ಕವಟಿಗಿಮಠ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.
• ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ (Chikkaballapur) ವಯೋ ಸಹಜ ಅನಾರೋಗ್ಯದ ಕಾರಣಗಳಿಂದ ಚುನಾವಣೆ ರಾಜಕೀಯಕ್ಕೆ ಹಾಲಿ ಸಂಸದ ಬಚ್ಚೆಗೌಡ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಸಚಿವ ಡಾ. ಸುಧಾಕರ್ ಸೇರಿ‌ ಹಲವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
• ರಾಯಚೂರು: ರಾಯಚೂರಿನಲ್ಲೂ ರಾಜಾ ಅಮರೇಶ ನಾಯಕ್ ಸಂಸದರಾಗಿದ್ದು, ಅಭ್ಯರ್ಥಿಯ ಬದಲಾವಣೆ ಕೂಗು ಕ್ಷೇತ್ರದಲ್ಲಿ ಕೇಳಿ ಬಂದಿದೆ. ಮಾಜಿ ಸಂಸದ ಬಿ.ವಿ ನಾಯಕ್ ಹೆಸರು ಇಲ್ಲಿ ಕೇಳಿ ಬಂದಿದೆ.
• ಉತ್ತರ ಕನ್ನಡದ : ಉತ್ತರ ಕನ್ನಡದಲ್ಲಿ ಕಳೆದ ನಾಲ್ಕು ವರ್ಷಗಳ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಸಂಸದ ಅನಂತ ಕುಮಾರ್ ಹೆಗೆಡೆ ಈಗ ವಿವಾದಗಳ ಮೂಲಕ ಚರ್ಚೆಯ ಕೇಂದ್ರ ಬಿಂದುವಾಗಿದ್ದಾರೆ. ಹೀಗಾಗಿ ಈ ಸಲ ಹೆಗಡೆಗೆ ಟಿಕೆಟ್ ಸಿಗೋದು ಡೌಟ್ ಎನ್ನಲಾಗಿದೆ.

ಇನ್ನು ಬಿಜೆಪಿಯು ತನ್ನ ಎರಡನೆ ಪಟ್ಟಿಯಲ್ಲಿ ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡ, ಸಿದ್ದೇಶ್ವರ್, ಕರಡಿ ಸಂಗಣ್ಣ ಸೇರಿ ಒಂಭತ್ತು ಮಂದಿ ಸಂಸದರಿಗೆ ಕೊಕ್ ಕೊಡಲಾಗಿದೆ‌.