Home Karnataka State Politics Updates ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ !! | ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್

ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ !! | ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್

Hindu neighbor gifts plot of land

Hindu neighbour gifts land to Muslim journalist

ಮಂಗಳೂರಿನಲ್ಲಿ ಹಲವು ದೇಶ ವಿರೋಧಿ ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಸಂಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರು, ಕೇರಳ, ದೆಹಲಿ ಸೇರಿದಂತೆ ಎಲ್ಲೇ ಸಂಘಟನೆಗಳು ಹುಟ್ಟಿಕೊಳ್ಳಲಿ, ಅವರನ್ನು ಸದೆಬಡಿಯುತ್ತೇವೆ. ಯಾವುದೇ ಕಾರಣಕ್ಕೂ ಅವರನ್ನು ಬಿಡಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಗೌರವ, ಸಾರ್ವಭೌಮತೆಗೆ ಕುಂದು ತರುವ ಸಂಸ್ಥೆಗಳನ್ನು ಬಿಡುತ್ತಿಲ್ಲ. ಯಾವುದನ್ನು ಯಾವ ಕಾಲಘಟ್ಟದಲ್ಲಿ ಬ್ಯಾನ್ ಮಾಡಬೇಕೋ ಮಾಡುತ್ತೇವೆ ಎಂದು ತಿಳಿಸಿದರು.

ಪಾಕಿಸ್ತಾನ್ ಜಿಂದಾಬಾದ್, ಛೋಟಾ ಪಾಕಿಸ್ತಾನ್ ಎಂದು ಕೂಗುವ ಪ್ರವೃತ್ತಿಗಳು ಜಮ್ಮು ಕಾಶ್ಮೀರದಲ್ಲಿ ಪ್ರಾರಂಭವಾಗಿತ್ತು. ಹಿಂದಿನ ಸರ್ಕಾರಗಳು ಇದನ್ನು ನಿಗ್ರಹಿಸಲು ವಿಫಲವಾಗಿದ್ದವು. ಪಾಕಿಸ್ತಾನದಲ್ಲಿ ಸರ್ಕಾರ ಬದಲಾವಣೆಯಾದಾಗ ಇಂತಹ ಘಟನೆಗಳು ಮತ್ತೆ ಪ್ರಾರಂಭವಾಗಿವೆ. ಇದನ್ನು ನಿಗ್ರಹಿಸುವ ಶಕ್ತಿ ಭಾರತಕ್ಕಿದ್ದು, ನಿಗ್ರಹ ಮಾಡುತ್ತೇವೆ ಎಂದರು.

ಪಾಕಿಸ್ತಾನದ ಏಜೆಂಟ್‌ನಂತೆ ನಡೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ, ಕೇಂದ್ರ ಸರ್ಕಾರ ಶಕ್ತವಾಗಿದೆ. ಧರ್ಮ ಸಂಘರ್ಷ ಪ್ರಕರಣಗಳು ನಡೆದಾಗ ನಿರ್ಲಕ್ಷ್ಯ ಮಾಡಿಲ್ಲ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗುವುದು. ಕವಲಂದೆ ಪ್ರಕರಣದಲ್ಲೂ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದರು.

ಪಾಕಿಸ್ತಾನ ಏಜೆಂಟ್‌ಗಳು ದೇಶದಲ್ಲಿ ಸಕ್ರಿಯವಾಗಿದ್ದಾರೆ. ಅದಕ್ಕಾಗಿಯೇ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದು ಹಾಕಿದ್ದೇವೆ. ದೇಶದಲ್ಲಿ ರಾಷ್ಟ್ರೀಯತೆ ಮೈಗೂಡಿಸಲು ಏನೇನು ಕಾನೂನು ಬೇಕು ಅದನ್ನು ತರಲಾಗುತ್ತಿದೆ ಎಂದರು.