Home Karnataka State Politics Updates Parliment Election : ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಡೆದದ್ದೇನು? ಕಳೆದುಕೊಂಡದ್ದು ಏನನ್ನು?!

Parliment Election : ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಡೆದದ್ದೇನು? ಕಳೆದುಕೊಂಡದ್ದು ಏನನ್ನು?!

Parliament Election

Hindu neighbor gifts plot of land

Hindu neighbour gifts land to Muslim journalist

Parliment Election : ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಲೋಕಸಭಾ ಚುನಾವಣೆಯ(Parliament Election) ಫಲಿತಾಂಶದ ಕುತೂಹಲಕ್ಕೆ ಅಂತೂ ತೆರೆ ಬಿದ್ದಿದೆ. ದೇಶದಲ್ಲಿ ಇಡೀ ರಾಜಕೀಯ ಲೆಕ್ಕಾಚಾರವೇ ಉಲ್ಟಾ ಆಗಿದೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳ ತಲೆಕೆಳಖಾಗಿವೆ. ಕೆಲವರು ಕಿಂಗ್ ಮೇಕರ್ ಆಗಿ ಮೆರೆದಿದ್ದಾರೆ. ಹೀಗಾಗಿ ಮುಂದೆ ಮೋದಿ ಪ್ರಧಾನಿ ಆಗುತ್ತಾರೋ? ಇಲ್ಲವೋ ಕಾದು ನೋಡಬೇಕಿದೆ. ಇದು ದೇಶದ ಚಿತ್ರಣ ಆದ್ರೆ ರಾಜ್ಯದಲ್ಲಿ ಏನೆಲ್ಲಾ ಆಯ್ತು? ಕಾಂಗ್ರೆಸ್(Congress), ಬಿಜೆಪಿ(BJP) ಹಾಗೂ ಜೆಡಿಎಸ್(JDS) ಕಳೆದುಕೊಂಡದ್ದು ಏನನ್ನು ಪಡಿದದ್ದು ಏನನ್ನು ?ಎಂದು ನೋಡೋಣ.

ರಾಜ್ಯದಲ್ಲಿ ಕೂಡ ನಿರೀಕ್ಷಿತವಾದ ಫಲಿತಾಂಶ ಬಂದಿಲ್ಲ. ಇಲ್ಲೂ ಲೆಕ್ಕಾಚಾರ ಉಲ್ಟಾ ಆಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ 19 ಸ್ಥಾನಗಳನ್ನು ಗೆದ್ದಿದೆ. ಇದರಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ 2 ಸ್ಥಾನಗಳಲ್ಲಿ ಜಯದ ನಗು ಬೀರಿತು. ಇನ್ನು ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್ 9 ಸ್ಥಾನಗಳನ್ನಷ್ಟೇ ಗೆಲ್ಲಲು ಸಫಲವಾಯಿತು. ಆದರೆ ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಈ ಬಾರಿ ಕಳೆದುಕೊಂಡಿದ್ದೇ ಹೆಚ್ಚು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸೀಟ್ಗಳನ್ನು ಗೆದ್ದು ತೃಪ್ತಿಪಟ್ಟಿವೆ.

ಬಿಜೆಪಿ:

2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಷ್ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಕ್ಷ 17 ಕ್ಷೇತ್ರಗಳಲ್ಲಿ ಗೆದ್ದು, ಎಂಟು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಎನ್‌ಡಿಎ ಮೈತ್ರಿಕೂಟದ ಲೆಕ್ಕಾಚಾರದ ಪ್ರಕಾರ ಬಿಜೆಪಿ ಮತ್ತು ಜೆಡಿಎಸ್ 19 ಕ್ಷೇತ್ರಗಳನ್ನು ಗೆದ್ದಿದ್ದು, ಕಳೆದ ಬಾರಿ ಚುನಾವಣ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ 6 ಕ್ಷೇತ್ರಗಳನ್ನು ಕಳೆದುಕೊಂಡಂತಾಗಿದೆ.

ಬಾಗಲಕೋಟೆ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ, ಬೆಂಗಳೂರು ದಕ್ಷಿಣ, ಬೆಳಗಾವಿ, ಬಿಜಾಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ- ಚಿಕ್ಕಮಗಳೂರು, ಉತ್ತರ ಕನ್ನಡಗಳಲ್ಲಿ ಬಿಜೆಪಿ ಗೆದ್ದಿದಿದೆ.

ಮಾಜಿ ಸಿಎಂಗಳಾದ ಜಗದೀಶ್ ಶೆಟ್ಟರ್. ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ವಿ ಸೋಮಣ್ಣ, ಡಾ ಕೆ ಸುಧಾಕರ್, ಕೇಂದ್ರ ಸಚಿವವ ಶೋಭಾ ಕರಂದ್ಲಾಜೆ, ಯದುವೀರ್ ಒಡೆಯರ್ ಗೆದ್ದ ಪ್ರಮುಖರಾಗಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ತೋರಿದ್ದರೆ, ಉತ್ತರ ಭಾಗದಲ್ಲಿ ಕಾಂಗ್ರೆಸ್ ಬಹಳ ಚೇತರಿಕೆ ಕಂಡಿದೆ.

ಬಿಜೆಪಿ ಕಳೆದುಕೊಂಡ ಕ್ಷೇತ್ರಗಳು:

ಚಾಮರಾಜನಗರ, ದಾವಣಗೆರೆ, ಚಿಕ್ಕೋಡಿ, ಕಲ್ಬುರ್ಗಿ, ಕೊಪ್ಪಳ, ಬೀದರ್, ರಾಯಚೂರು, ಬಳ್ಳಾರಿ

ಕಾಂಗ್ರೆಸ್:

ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ ಒಂದು ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 9 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಚುನಾವಣಾ ಗೆಲುವಿನ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ಹೆಚ್ಚಿಸಿಕೊಂಡಿದೆ. ಆದರೆ ಪ್ರತಿಷ್ಠಿತ ಕ್ಷೇತ್ರವಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಉಳಿಸಿಕೊಳ್ಳಲು ಅದು ವಿಫಲವಾಗಿದೆ.

ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕೋಡಿ, ದಾವಣಗೆರೆ, ಗುಲ್ಬರ್ಗಾ, ಹಾಸನ, ಕೊಪ್ಪಳ ಮತ್ತು ರಾಯಚೂರು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ. ಉತ್ತರ ಭಾಗದಲ್ಲಿ ಕಾಂಗ್ರೆಸ್ ಬಹಳ ಚೇತರಿಕೆ ಕಂಡಿದೆ.

ಜೆಡಿಎಸ್:

ಜೆಡಿಎಸ್ ಕಳೆದ ಬಾರಿ ಒಂದು ಕ್ಷೇತ್ರ ಮಾತ್ರ ಗೆದ್ದಿತ್ತು. ಈ ಬಾರಿ ಎರಡು ಕ್ಷೇತ್ರದಲ್ಲಿ ಗೆಲವು ಸಾಧಿಸುವ ಮೂಲಕ ಗೆಲುವಿನ ಪ್ರಮಾಣವನ್ನು ದ್ವಿಗುಣಗೊಳಿಸಿಕೊಂಡಿದೆ. ಆದರೆ ಕಳೆದ ಬಾರಿ ಗೆದ್ದ ಹಾಸನ ಕ್ಷೇತ್ರ ಉಳಿಸಿಕೊಳ್ಳಲು ಜೆಡಿಎಸ್ ವಿಫಲವಾಗಿದ್ದು, ಹೊಸತಾಗಿ ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಗೆಲುವಿನ ರುಚಿ ಸವಿದಿದೆ.

ಅಂದಹಾಗೆ ಕರ್ನಾಟಕದ ಮತದಾರನ ನಾಡಿಮಿಡಿತ ಅಷ್ಟು ಸುಲಭವಾಗಿ ಅರ್ಥೈಸುಕೊಳ್ಳುವಂಥದ್ದಲ್ಲ. ಇದಕ್ಕೆ ಕಾರಣ ಕಳೆದೆರಡು ದಶಕಗಳ ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸಿದರೆ ನಮಗೆ ತಿಳಿಯುತ್ತದೆ. ಹೆಚ್ಚೇಕೆ ಒಂದೇ ವರ್ಷದ ಅಂತರದಲ್ಲಿ ನಡೆದ ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಭಿನ್ನಭಿನ್ನವಾದ ಫಲಿತಾಂಶಗಳು ಬಂದಿವೆ. ಅಂದರೆ ಈ ರಾಜ್ಯದ ಮತದಾರ ರಾಷ್ಟ್ರ ರಾಜಕಾರಣ ಮತ್ತು ರಾಜ್ಯ ರಾಜಕಾರಣವನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗುವುದಿಲ್ಲ ಎಂಬುದು ಸ್ಪಷ್ಟ.