Home Karnataka State Politics Updates JDS Party: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂಗೆ ಬಿಗ್ ಶಾಕ್- ಪಕ್ಷದಿಂದಲೇ ಉಚ್ಚಾಟನೆ ಮಾಡಿದ...

JDS Party: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂಗೆ ಬಿಗ್ ಶಾಕ್- ಪಕ್ಷದಿಂದಲೇ ಉಚ್ಚಾಟನೆ ಮಾಡಿದ ದೇವೇಗೌಡರು !!

JDS Party

Hindu neighbor gifts plot of land

Hindu neighbour gifts land to Muslim journalist

JDS Party: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಹಲವಾರು ಕುತೂಹಲಕಾರಿ ಘಟನೆಗಳು ನಡೆಯುತ್ತಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳಲ್ಲಿ ಕೂಡ ಒಂದೊಂದು ಹೈಡ್ರಾಮಗಳು ನಡೆಯುತ್ತಿವೆ. ಅದರಲ್ಲೂ ಜೆಡಿಎಸ್(JDS Party) ಒಡೆದು ಎರಡು ಭಾಗವಾಗುವಂತ ಎಲ್ಲ ಲಕ್ಷಣಗಳು ಕಂಡುಬರುತ್ತಿದೆ. ಇದೀಗ ನಮ್ಮದೇ ಒರಿಜಿನಲ್ JDS ಎಂದು ಹೇಳಿಕೊಂಡು ಪಕ್ಷದ ಇಬ್ಬಾಗಕ್ಕೆ ಮುನ್ನುಡಿ ಬರೆಯಲು ಹೊರಟಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ(CM Ibrahim) ಅವರಿಗೆ ಬಾರಿ ದೊಡ್ಡ ಶಾಖ್ ಎದುರಾಗಿದೆ.

ಹೌದು, ನಿನ್ನೆ ತಾನೆ ಜೆಡಿಎಸ್‌ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಲಾದ ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆದರೆ ಇಂದು ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಜೆಡಿಎಸ್ ವರಿಷ್ಠಾದ ಎಚ್ ಡಿ ದೇವೇಗೌಡ(H D Devegowda) ಅವರು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಮ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಖಡಕ್ ಆದೇಶ ಹೊರಡಿಸಿದ್ದಾನೆ.

ಅಂದಹಾಗೆ ದೇವೇಗೌಡರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಹಾಗೆಯೇ ಜೆಡಿಎಸ್‌ನ ರಾಜ್ಯಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳನ್ನೊಳಗೊಂಡಂತೆ ಇಡೀ ರಾಜ್ಯ ಘಟಕವನ್ನು ವಿಸರ್ಜಿಸುವ ನಿರ್ಣಯ ಕೈಗೊಂಡು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(H D Kumarswamy) ಅವರನ್ನು ಅಹಡಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸಭೆ ಸರ್ವಾನುಮತದ ತೀರ್ಮಾನ ಕೈಗೊಂಡಿದೆ.

ಇಷ್ಟೇ ಅಲ್ಲದೆ ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ. ಒಟ್ಟಿನಲ್ಲಿ ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ಹಾಗೂ ವಿಸರ್ಜನೆಯ ಮಹತ್ವದ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದು ಭಾರೀ ಕುತೂಹಲ ಕೆರಳಿಸಿದೆ