Home Karnataka State Politics Updates BJP: ಬಿಜೆಪಿಯ ಮತ್ತೊಬ್ಬ ಹಿರಿಯ ಸಂಸದನಿಂದ ರಾಜಕೀಯ ನಿವೃತ್ತಿ ಘೋಷಣೆ

BJP: ಬಿಜೆಪಿಯ ಮತ್ತೊಬ್ಬ ಹಿರಿಯ ಸಂಸದನಿಂದ ರಾಜಕೀಯ ನಿವೃತ್ತಿ ಘೋಷಣೆ

BJP

Hindu neighbor gifts plot of land

Hindu neighbour gifts land to Muslim journalist

BJP: ಕೆಲವು ದಿನಗಳ ಹಿಂದಷ್ಟೇ ಬಿಜೆಪಿಯ ಪ್ರಬಲ ನಾಯಕ ಮಾಜಿ ಸಿಎಂ ಹಾಗೂ ಹಾಲಿ ಸಂಸದರಾಗಿರುವ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಈ ಬೆನ್ನಲ್ಲೇ ಬಿಜೆಪಿಯ(BJP) ಮತ್ತೊಬ್ಬ ಹಾಲಿ ಸಂಸದರು ತಮ್ಮ ರಾಜಕೀಯ ಜೀವನಕ್ಕೆ ನಿವೃತ್ತಿಯನ್ನು ಘೋಷಿಸುತ್ತೇನೆ ಎಂದು ಹೇಳಿದ್ದಾರೆ.

ಹೌದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ರು. ಇದೀಗ ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್(V Shrivas prasad) ಅವರು ಮುಂದಿನ ವರ್ಷ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.

ಅಂದಹಾಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಾರ್ಚ್ 17, 2024ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷವಾಗುತ್ತದೆ. ಹೀಗಾಗಿ ಮಾರ್ಚ್‌ 17 ರಂದು ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ. ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ.

 

ಇದನ್ನು ಓದಿ: Drought Relief Fund: ರಾಜ್ಯದ ರೈತರಿಗೆ ಮಹತ್ವದ ಸುದ್ದಿ- ಬರ ಪರಿಹಾರದ ಹಣ ಬೇಕಂದ್ರೆ 15 ದಿನದೊಳಗೆ ಈ ಕೆಲಸ ಕಡ್ಡಾಯ !!