Home Karnataka State Politics Updates H D Kumarswamy: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ – ತಪ್ಪು ಮಾಡಿದವನನ್ನು ಕ್ಷಮಿಸಲ್ಲ ಎಂದ...

H D Kumarswamy: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ – ತಪ್ಪು ಮಾಡಿದವನನ್ನು ಕ್ಷಮಿಸಲ್ಲ ಎಂದ ಎಚ್ ಡಿ ಕುಮಾರಸ್ವಾಮಿ !!

H D Kumaraswamy

Hindu neighbor gifts plot of land

Hindu neighbour gifts land to Muslim journalist

H D Kumarswamy: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ವಿಚಾರ ರಾಜ್ಯದ್ಯಾಂತ ಸದ್ದುಮಾಡುತ್ತಿದೆ. ಇದು ಮೈತ್ರಿ ಪಕ್ಷಗಳಿಗೆ ಮಾತ್ರವಲ್ಲದೆ ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬಕ್ಕೂ ಕಪ್ಪು ಚುಕ್ಕಿ ತಂದೊಡ್ಡಿದೆ. ಆದರೆ ಇದರ ಸತ್ಯಾಸತ್ಯತೆ ಏನೆಂದು ತಿಳಿಯಬೇಕಷ್ಟೆ. ಆದರೂ ಇದೀಗ ಈ ಪ್ರಕರಣದ ಕುರಿತು ಮಾಜಿ ಸಿಎಂ ಹಾಗೂ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ ಎಚ್ ಡಿ ಕುಮಾರಸ್ವಾಮಿ(H D Kumarswamy) ಅವರು ಪ್ರತಿಕ್ರಿಯಿಸಿದ್ದು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.

ಇದನ್ನೂ ಓದಿ:  CET ಮರು ಪರೀಕ್ಷೆ ? ಸರ್ಕಾರದ ಮುಂದಿದೆ ಈ ಎರಡು ಆಯ್ಕೆ

ಹೌದು, ಜೆಡಿಎಸ್‌(JDS) ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ನೆಲದ ಕಾನೂನಲ್ಲಿ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು ಉಪ್ಪು ತಿಂದವನು ನೀರು ಕುಡಿಯಲೇಬೇಕು. ಹೆಣ್ಣುಮಕ್ಕಳ ವಿಚಾರದಲ್ಲಿ ನಾನಾಗಲಿ, ಹೆಚ್ ಡಿ ದೇವೇಗೌಡ(H D Devegowda) ಅವರಾಗಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ. ಆದರೀಗ ಹಾಸನ ಚುನಾವಣಾ ಪ್ರಚಾರ ವೇಳೆ ಪ್ರಕರಣ ಶುರುವಾಗಿದೆ. ಈಗಾಗಲೆ ಸಿಎಂ ಎಸ್ ಐಟಿ ತನಿಖೆಗೆ ಆದೇಶ ನೀಡಿದ್ದಾರೆ ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಬರುತ್ತಾರೆ. ಅದು ಅವರ ಕೆಲಸ, ನಾನು ಅದರ ಬಗ್ಗೆ ಏನನ್ನೂ ಹೇಳಲು ಆಗುವುದಿಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

JDS ನಿಂದ ಪ್ರಜ್ವಲ್ ಉಚ್ಛಾಟನೆ?

ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ(G T Devegowda) ಅವರು, ಈ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀನಿ. ಎಲ್ಲವನ್ನೂ ನಮ್ಮ ಪಕ್ಷದಲ್ಲಿ ಹೈಕಮಾಂಡ್ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.