Home Karnataka State Politics Updates Puttur assembly congress : ಅತೀ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಮಹಿಳೆಗೆ ಅವಮಾನವೇ-ಪುತ್ತೂರು...

Puttur assembly congress : ಅತೀ ಹೆಚ್ಚು ಮಹಿಳಾ ಮತದಾರರಿರುವ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಮಹಿಳೆಗೆ ಅವಮಾನವೇ-ಪುತ್ತೂರು ಮಹಿಳಾ ಕಾಂಗ್ರೆಸ್

Puttur assembly congress

Hindu neighbor gifts plot of land

Hindu neighbour gifts land to Muslim journalist

Puttur assembly congress : ಪುತ್ತೂರು : ಬಿಜೆಪಿಯು ದಕ್ಷಿಣ ಕನ್ನಡದಲ್ಲಿ ಮಹಿಳೆಯರಿಗೆ ಪುತ್ತೂರು ಮತ್ತು ಸುಳ್ಯದಲ್ಲಿ ಅವಕಾಶ ನೀಡಿದೆ.ಆದರೆ ಕಾಂಗ್ರೆಸ್ ಪಕ್ಷ ಮಹಿಳೆಯನ್ನುಕಡೆಗಣಿಸುವ ಮೂಲಕ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ಇರುವ ಮಹಿಳಾ ಮತದಾರರನ್ನು ಅವಮಾನಿಸುವ ಕೆಲಸದಲ್ಲಿ ತೊಡಗಿದೆ ಎಂದು ಅನಿಸುತ್ತಿದೆ.ಕಾಂಗ್ರೆಸ್ ಹೈಕಮಾಂಡ್ (Puttur assembly congress) ಈ ವಿಷಯದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.ಇಲ್ಲವಾದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಮುಖಂಡರು ರವಾನಿಸಿದ್ದಾರೆ.

ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದ್ ಅರಸ್ ಮಾತನಾಡಿದರು.

ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿಯೂ ಹಾಗೂ ಶಕುಂತಳಾ ಶೆಟ್ಟಿಯವರು ಪಕ್ಷೇತರರರಾಗಿ ಸ್ಪರ್ಧಿಸಲು ಅಗ್ರಹಿಸುವುದಾಗಿಯೂ ಅಧ್ಯಕ್ಷೆ ಅರಸ್ ತಿಳಿಸಿದ್ದಾರೆ.

ಶಕುಂತಳಾ ಶೆಟ್ಟಿಯವರು ತಮ್ಮಶಾಸಕತ್ವದ ” ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಮಹಿಳೆಯರ ರಕ್ಷಣೆಗೆ ಮಹಿಳಾ ಪೋಲಿಸ್ ಠಾಣೆಯನ್ನು ಪುತ್ತೂರಿನಲ್ಲಿ ಆರಂಭಿಸಿದರು. ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸ್ತ್ರೀ ಶಕ್ತಿ ಸಂಘಟನೆಗಳನ್ನು ಬಲಪಡಿಸಲು ಸ್ತ್ರೀ ಶಕ್ತಿ ಭವನದ ಸ್ಥಾಪನೆ ಮಾಡಿದ್ದಾರೆ. ಮಹಿಳೆಯರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುವ ಮೂಲಕ ಮಹಿಳೆಯರಿಗೆ ಭರವಸೆಯ
ಆಶಾಕಿರಣವಾಗಿದ್ದಾರೆ ಎಂದರು.