Home Karnataka State Politics Updates Dr. Revanna : ಹಾಸನ ಟಿಕೆಟ್ ಫೈಟ್ ನಡುವೆ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ ರೇವಣ್ಣ!

Dr. Revanna : ಹಾಸನ ಟಿಕೆಟ್ ಫೈಟ್ ನಡುವೆ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ ರೇವಣ್ಣ!

Dr. Revanna

Hindu neighbor gifts plot of land

Hindu neighbour gifts land to Muslim journalist

Dr. Revanna : ಹಾಸನ(Hassan) ಕ್ಷೇತ್ರದಲ್ಲಿ ಜೆಡಿಎಸ್(JDS) ಟಿಕೆಟ್ ಕಗ್ಗಂಟಾಗಿರುವ ಬೆನ್ನಲ್ಲೇ ಪಕ್ಷಾಂತರಗಳು, ಪಕ್ಷದಿಂದ ಉಚ್ಛಾಟನೆ ಮಾಡುವ ಕಾರ್ಯಗಳು ಭರದಿಂದ ಸಾಗುತ್ತಿವೆ. ಇದರ ಬೆನ್ನಲೇ ತಾಲೂಕಿನ ಹೆಸರಾಂತ ವೈದ್ಯ ಡಾ. ರೇವಣ್ಣ (Dr. Revanna) ಬಿಜೆಪಿಗೆ ಸೋಮವಾರ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಹೌದು, ಟಿ ನರಸೀಪುರುದ(T Narsipura) ಖ್ಯಾತ ವೈದ್ಯ ಡಾ. ರೇವಣ್ಣ ಅವರು ತಮ್ಮ ಅಪಾರ ಬೆಂಬಲಿಗರ ಜೊತೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾಲ್‌ ಕಟೀಲ್(Nalin Kumar Kateel) ಅವರ ನೇತೃತ್ವದಲ್ಲಿ ಬಿಜೆಪಿ(BJP)ಗೆ ಸೇರ್ಪಡೆಯಾದರು.

ಪಕ್ಷ ಸೇರ್ಪಡೆಯಾಗಿ ಮಾತನಾಡಿದ ಅವರು, ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಇಂದಿನಿಂದ ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇನೆ, ಟಿ. ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ನಾನು ಕೂಡ ಪ್ರಬಲ ಆಕಾಂಕ್ಷಿ ಎಂದರು.

ಕೇಂದ್ರ ಸಚಿವ ಭಗವಂತ ಕೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಮಂಗಳ ಸೋಮಶೇಖರ್‌, ಟಿ. ನರಸೀಪುರ ಮಂಡಲ ಅಧ್ಯಕ್ಷ ಲೋಕೇಶ್‌ ನಾಯಕ್‌, ಪ್ರಧಾನ ಕಾರ್ಯದರ್ಶಿ ಲೋಕೇಶ್‌ಗೌಡ, ಉದ್ಯಮಿ ಎಸ್‌ಎಂಆರ್‌ ಪ್ರಕಾಶ್‌, ಮೈಸೂರು ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆಬ್ಬೆಹುಂಡಿ ಶಿವಕುಮಾರ್‌, ಯುವ ಮೋರ್ಚಾ ಅಧ್ಯಕ್ಷ ಶಿವಶಂಕರ್‌, ಉಪಾಧ್ಯಕ್ಷ ಸಿ.ಬಿ. ಸಿದ್ದೇಶ್‌, ಯೋಗೇಶ್‌ ಇದ್ದರು.

ಇನ್ನು ಈ ನಡುವೆಯೇ ಜೆಡಿಎಸ್ ನಿಂದ ಹಾಸನ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇರೋದ್ರಿಂದಿ ಭವಾನಿ ರೇವಣ್ಣನವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಭವಾನಿ ರೇವಣ್ಣ ಬೆಂಬಲಿಗರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಕಾರ ಶೀಘ್ರದಲ್ಲೇ ಪ್ರಕಟಿಸಲಾದ ಎರಡನೇ ಪಟ್ಟಿಯಲ್ಲಿ ಹಾಸನದ ಅಭ್ಯರ್ಥಿಯ ಹೆಸರನ್ನು ಸೇರಿಸಲಾಗುವುದು. ಆದರೆ, ಎಚ್.ಪಿ.ಸ್ವರೂಪ್ ಅವರನ್ನು ಬೆಂಬಲಿಸುವ ಅಥವಾ ಪ್ರಚಾರದಿಂದ ಅಂತರ ಕಾಯ್ದುಕೊಳ್ಳುವ ಎಚ್.ಡಿ.ರೇವಣ್ಣ, ಭವಾನಿ, ಪ್ರಜ್ವಲ್ ಮತ್ತು ಸೂರಜ್ ನಿರ್ಧಾರದ ಮೇಲೆಯೇ ಎಲ್ಲರ ಕಣ್ಣು ನೆಟ್ಟಿದೆ.