

CM Siddaramaiah: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ (DCM DK Shivakumar) ಹೇಳಿಕೆ ವಿಚಾರವಾಗಿ, ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.
ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಸ್ಪಷ್ಟನೆ ನೀಡಿದ್ದಾರೆ.
ಹೌದು, ಮುಖ್ಯಮಂತ್ರಿಗಳು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ನಂತರ ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ (DCM DK Shivakumar) ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಅದಲ್ಲದೆ ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ಅಲ್ಲಿ ಏನು ನಡೆದಿದೆಯೋ ಅದು ನನ್ನ ಹೇಳಿಕೆ ಅಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರತಿಕ್ರಿಯಿಸಿದರು.













