Home Karnataka State Politics Updates Raichur: ರಾಯಚೂರಿನಲ್ಲಿ ಬಿಜೆಪಿ ಪ್ರಚಾರದ ವಾಹನದ ಮೇಲೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

Raichur: ರಾಯಚೂರಿನಲ್ಲಿ ಬಿಜೆಪಿ ಪ್ರಚಾರದ ವಾಹನದ ಮೇಲೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

Raichur

Hindu neighbor gifts plot of land

Hindu neighbour gifts land to Muslim journalist

BJP Compaign in Raichur : ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರುತ್ತಿದ್ದು, ನಾಯಕರು ಅಖಾಡಕ್ಕೆ ಇಳಿದಿದ್ದಾರೆ. ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಈ ನಡುವೆಯೇ ಮೈಸೂರು, ತುಮಕೂರು ಸೇರಿದಂತೆ ಕೆಲವು ಕಡೆ ಕಲ್ಲು ತೂರಾಟಗಳು ಹೆಚ್ಚಾಗುತ್ತಿವೆ. ಈ ಬೆನ್ನಲ್ಲೇ ರಾಯಚೂರಿನಲ್ಲೂ ಸಹ ಕಲ್ಲು ತೂರಾಟ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಸ್ಕಿಯ ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಪ್ರಚಾರದ (BJP Compaign in Raichur) ವಾಹನದ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.. ನಿನ್ನೆ ಬೆಳಿಗ್ಗೆಯಿಂದ ಕ್ರುಸರ್ ವಾಹನದ ಮೂಲಕ ಬಿಜೆಪಿ ಕಾರ್ಯಕರ್ತರು ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ಮಾಡುತ್ತಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಬೆಂಬಲಿಗರಿಂದ ಕ್ರುಸರ್ ವಾಹನದ ಗಾಜು ಒಡೆದು ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ.

ಇತ್ತ,ತುಮಕೂರು ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ನಿನ್ನೆ ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಮೇಲೆ ಕಿಡಿಗೇಡಿ ಕಲ್ಲೆಸೆದಿದ್ದ. ಮುಂಜಾನೆಯಿಂದಲೂ ಕ್ಷೇತ್ರದಲ್ಲಿ ತಮ್ಮ ಅಪಾರ ಕಾರ್ಯಕರ್ತರೊಟ್ಟಿಗೆ ಪ್ರಚಾರ ನಡೆಸುತ್ತಿದ್ದ ಪರಮೇಶ್ವರ್, ಮಧ್ಯಾಹ್ನದ ವೇಳೆಗೆ ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಗೆ ಆಗಮಿಸಿದ್ದರು.

ಇದನ್ನೂ ಓದಿ:FIR on V Somanna: ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮೇಲೆ FIR !