Home Breaking Entertainment News Kannada ಮಾಜಿ ಸಿಎಂ ಯಡಿಯೂರಪ್ಪ ಬಳಿಕ ಅದೇ ಸಿನಿಮಾದಲ್ಲಿ ಬಣ್ಣ ಹಚ್ಚಿದ ಮತ್ತೋರ್ವ ರಾಜಕಾರಣಿ !! |...

ಮಾಜಿ ಸಿಎಂ ಯಡಿಯೂರಪ್ಪ ಬಳಿಕ ಅದೇ ಸಿನಿಮಾದಲ್ಲಿ ಬಣ್ಣ ಹಚ್ಚಿದ ಮತ್ತೋರ್ವ ರಾಜಕಾರಣಿ !! | ಒಂದೇ ಟೇಕ್ ನಲ್ಲಿ ತನ್ನ ಪಾತ್ರ ನಿರ್ವಹಿಸಿ ಸೈ ಎನಿಸಿಕೊಂಡ ಆರೋಗ್ಯ ಸಚಿವ ಡಾ.ಕೆ ಸುಧಾಕರ್

Hindu neighbor gifts plot of land

Hindu neighbour gifts land to Muslim journalist

ಹೇಗೆ ಸಿನಿಮಾ ನಟರು ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೋ ಹಾಗೆಯೇ ರಾಜಕಾರಣಿಗಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇನು ಹೊಸತೇನಲ್ಲ. ಕರ್ನಾಟಕದ ‘ರಾಜಾಹುಲಿ’ ಬಿ.ಎಸ್ ಯಡಿಯೂರಪ್ಪನವರು ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಇದೀಗ ಆರೋಗ್ಯ ಸಚಿವರು ಕೂಡ ಬಹು ನಿರೀಕ್ಷಿತ ಸಿನಿಮಾ ಒಂದರಲ್ಲಿ ಬಣ್ಣಹಚ್ಚಿದ್ದಾರೆ.

ಹೌದು. ನೈಜ ಘಟನೆಯಾಧಾರಿತ ತನುಜಾ ಸಿನಿಮಾದಲ್ಲಿ ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದರು. ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ಕೂಡ ಅದೇ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ.

ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ , ಸಚಿವ ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಇನ್ನಿತರ ಸಹಾಯದಿಂದ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಪಡೆದಿದ್ದು, ಎಲ್ಲರ ಹುಬ್ಬೇರಿಸಿತ್ತು. ಅಷ್ಟೇ ಅಲ್ಲದೆ ಆ ನೈಜ ಘಟನೆಯಾಧಾರಿತ ವರದಿ ಆಧರಿಸಿ ಸಿನಿಮಾ ಕೂಡ ಸೆಟ್ಟೇರಿದ್ದು, ಆ ಸಿನಿಮಾಗೆ ತನುಜಾ ಎಂದು ನಾಮಕರಣ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ತಮ್ಮ ಪಾತ್ರಕ್ಕೆ ತಾವೇ ನಟಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಸಚಿವರಾದ ಡಾ.ಕೆ ಸುಧಾಕರ್ ಅವರು ಕೂಡ ಅವರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ. ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಕೂಡ ಮಾಡಿದ್ದಾರೆ. ಕೇವಲ ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ.

ಇನ್ನು ಈ ಚಿತ್ರಕ್ಕೆ ರಾಜ್ಯಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿಯವರ ನಿರ್ದೇಶನವಿದ್ದು, ಈ ಚಿತ್ರವು ಶಿವಮೊಗ್ಗದ ಸುತ್ತ ಮತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. ತಾರಾಗಣದಲ್ಲಿ ರಾಜೇಶ್ ನಟರಂಗ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಾಸರಗೋಡು ಖ್ಯಾತಿಯ ಸಪ್ತಾ ಪಾವೂರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲ ನಟಿ ಬೇಬಿ ಶ್ರೀ ಅಭಿನಯಿಸಿದ್ದಾರೆ.