Home Karnataka State Politics Updates Karnataka Assembly Election 2023: ಕರ್ನಾಟಕ ಅಸೆಂಬ್ಲಿ ಎಲೆಕ್ಷನ್ಗೆ ಕ್ಷಣಗಣನೆ ಶುರು! ಕೂಡಲೇ ಕಾರ್ಯಪ್ರವೃತ್ತರಾಗಲು...

Karnataka Assembly Election 2023: ಕರ್ನಾಟಕ ಅಸೆಂಬ್ಲಿ ಎಲೆಕ್ಷನ್ಗೆ ಕ್ಷಣಗಣನೆ ಶುರು! ಕೂಡಲೇ ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಸೂಚನೆ!

Karnataka Assembly Election 2023

Hindu neighbor gifts plot of land

Hindu neighbour gifts land to Muslim journalist

Karnataka Assembly Election 2023: ಕರ್ನಾಟಕ ವಿಧಾನಸಭೆ(Karnataka Assembly) ಚುನಾವಣೆ ಯಾವಾಗ? ದಿನಾಂಕ ಘೋಷಣೆ ಎಂದು ಎಂಬ ಕುತೂಹಲಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಎಲ್ಲಾ ಜಿಲ್ಲೆಗಳಿಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯ ಚುನಾವಣಾ ಕಚೇರಿಯಿಂದ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

ಹೌದು, ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಕುರಿತಾಗಿ ಸೂಚನೆ ನೀಡಿ ಈ ಪತ್ರ ಬರೆಯಲಾಗಿದೆ. ಅಲ್ಲದೆ ಚುನಾವಣೆಗಾಗಿ ಭರ್ಜರಿ ಸಿದ್ದತೆ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗ ( Karnataka Assembly Election 2023) ಮಾರ್ಚ್ 25 ರ ಬಳಿಕ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು, ಯಾವುದೇ ಕ್ಷಣದಲ್ಲಿ ಬೇಕಾದ್ರೂ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆ ಆಗಬಹುದು ಎನ್ನಲಾಗಿದೆ. ಆದ್ರೆ, ಮಾರ್ಚ್‌ 27 ಅಥವಾ 28 ರಂದು ದಿನಾಂಕ ಘೋಷಣೆ ಸಾಧ್ಯತೆ ಇದೆ. ಹೀಗಾಗಿ, ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಕಚೇರಿಯಿಂದ ಪತ್ರ ಬರೆಯಲಾಗಿದೆ.

ಅಂದಹಾಗೆ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಎಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಈಗಿನಿಂದಲೇ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಕೆಲವು ಮಾಡಲೇಬೇಕಾದ ಚುನಾವಣಾ ಪೂರ್ವ ಸಿದ್ಧತೆಯನ್ನು ಕಡ್ಡಾಯವಾಗಿ ಚುನಾವಣೆ ಘೋಷಣೆಗೆ ಮುನ್ನಡೆ ಮಾಡಿ ಮುಗಿಸಬೇಕೆಂದು ಸೂಚಿಸಲಾಗಿದೆ.

ಈ ಬಾರಿ ಚುನಾವಣೆ ಅಕ್ರಮಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆಯೋಗವು ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಸಂಜೆ 5 ರಿಂದ ಬೆಳಿಗ್ಗೆ 5ರವರೆಗೆ ಎಟಿಎಂ ವಹಿವಾಟು ಸೇರಿದಂತೆ ಎಲ್ಲಾ ಹಣಕಾಸು ವಹಿವಾಟಿನ ಮೇಲೆ ಹದ್ದಿನ ಕಣ್ಣನ್ನು ಇರಿಸಲಾಗಿದೆ. ಯುಪಿಎ ಪೇಮೆಂಟ್ ವರ್ಗಾವಣೆಯ ವಹಿವಾಟಿನ ಬಗ್ಗೆಯೂ ಕಣ್ಣಿರಿಸಲಾಗಿದೆ. ಅಕ್ರಮ ತಡೆಗೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.