Home Karnataka State Politics Updates ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷದ ಅಭ್ಯರ್ಥಿ ಹೆಸರು ಪ್ರಕಟ

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷದ ಅಭ್ಯರ್ಥಿ ಹೆಸರು ಪ್ರಕಟ

Hindu neighbor gifts plot of land

Hindu neighbour gifts land to Muslim journalist

ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಘೋಷಿಸಿದ್ದಾರೆ.
ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಸಭೆಯ ಬಳಿಕ ಪವಾರ್ ಅವರು ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಘೋಷಿಸಿದ್ದಾರೆ.

ನಿನ್ನೆಯಷ್ಟೇ ಉಪ ರಾಷ್ಟ್ರಪತಿ ಚುನಾವಣೆಗೆ  ಎನ್ ಡಿಎ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಶ್ ಧಂಕರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಬೆನ್ನಲ್ಲೇ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಮಾರ್ಗರೇಟ್ ಆಳ್ವಾ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಎ ಪದವಿ ಪಡೆದರು ಮತ್ತು ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ವಕೀಲೆಯಾಗಿ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

80 ರ ಹರೆಯದ ಮಾರ್ಗರೇಟ್ ಆಳ್ವಾ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಗೋವಾ, ಗುಜರಾತ್,ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲೆಯಾಗಿ ಆಗಿ ಆಗಸ್ಟ್ 2014 ರಲ್ಲಿ ತನ್ನ ಅಧಿಕಾರಾವಧಿಯ ಅಂತ್ಯದವರೆಗೆ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕಿ.ರಾಜ್ಯ ಸಭೆ, ಲೋಕ ಸಭಾ ಸದಸ್ಯೆಯಾಗಿ, ಕೇಂದ್ರ ಸಚಿವೆಯಾಗಿ ಕೆಲಸ ಮಾಡಿದ ಸುದೀರ್ಘ ರಾಜಕೀಯ ಮತ್ತು ಆಡಳಿತ ಅನುಭವ ಹೊಂದಿದ್ದಾರೆ.