Home Karnataka State Politics Updates Donald Trump: ‘ಮೋದಿಯನ್ನು ಇಡೀ ಜಗತ್ತು ಪ್ರೀತಿಸುತ್ತದೆ’- ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಪ್ರಧಾನಿ ಮೋದಿ ಹಾಗೂ ಭಾರತವನ್ನು...

Donald Trump: ‘ಮೋದಿಯನ್ನು ಇಡೀ ಜಗತ್ತು ಪ್ರೀತಿಸುತ್ತದೆ’- ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಪ್ರಧಾನಿ ಮೋದಿ ಹಾಗೂ ಭಾರತವನ್ನು ಹಾಡಿ ಹೊಗಳಿದ ಟ್ರಂಪ್

Hindu neighbor gifts plot of land

Hindu neighbour gifts land to Muslim journalist

Donal Trump: ಅಮೇರಿಕಾದ(USA) ಅಧ್ಯಕ್ಷೀಯ ಚುನಾವಣೆ ಮುಗಿದು ಫಲಿತಾಂಶ ಹೊರ ಬಿದ್ದಿದೆ. ಡೊನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಮೆರಿಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಬೆನ್ನಲ್ಲೇ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ(PM Modi) ಯವರನ್ನು ಹಾಡಿ ಹೊಗಳಿದ್ದಾರೆ.

ಹೌದು, ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಡೊನಾಲ್ಡ್ ಟ್ರಂಪ್(Donald Trup) ಅವರು ಗೆಲುವು ಸಾಧಿಸುತ್ತಿದ್ದಂತೆ ಮೋದಿ ಅವರು ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿಯವರು ತಮ್ಮ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅದ್ಭುತವಾದ ಸಂಭಾಷಣೆಯನ್ನು ನಡೆಸಿದ್ದೇನೆ ಮತ್ತು ಅವರ ಮಹಾನ್ ಗೆಲುವಿಗೆ ಅಭಿನಂದನೆಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಈ ಬೆನ್ನಲ್ಲೇ ಮೂಲಗಳ ಪ್ರಕಾರ, ಇಬ್ಬರೂ ನಾಯಕರು ವಿಶ್ವಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇಡೀ ಜಗತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತಿದೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ. ಭಾರತ ಅದ್ಭುತ ದೇಶ ಮತ್ತು ಪ್ರಧಾನಿ ಮೋದಿ ಅದ್ಭುತ ವ್ಯಕ್ತಿ ಎಂದು ಟ್ರಂಪ್ ಹೇಳಿದರು. ಮೋದಿ ಮತ್ತು ಭಾರತವನ್ನು ನನ್ನ ನಿಜವಾದ ಸ್ನೇಹಿತ ಎಂದು ಪರಿಗಣಿಸುವುದಾಗಿ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಗೆ ತಿಳಿಸಿದ್ದಾರೆ. ತಮ್ಮ ಗೆಲುವಿನ ನಂತರ ಮೊದಲು ಮಾತನಾಡಿದ ವಿಶ್ವ ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರು ಎಂದು ವರದಿಯಾಗಿದೆ.