Home Karnataka State Politics Updates BJP: 2028 ರ ವರೆಗೆ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ?

BJP: 2028 ರ ವರೆಗೆ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ?

Hindu neighbor gifts plot of land

Hindu neighbour gifts land to Muslim journalist

 

BJP: ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿನ ದುರ್ಬಲತೆ ಎದ್ದು ಕಾಣುತ್ತಿದೆ. ಒಬ್ಬೊಬ್ಬ ನಾಯಕರು ಒಂದೊಂದು ದಿಕ್ಕಿನತ್ತ ಮುಖ ಮಾಡಿ ಅಸಮಾಧಾನವನ್ನು ಸೂಚಿಸುತ್ತಿದ್ದಾರೆ. ಸಮರ್ಥ ನಾಯಕತ್ವವಿಲ್ಲದೆ ರಾಜ್ಯ ಬಿಜೆಪಿ ಸ್ವರಗುತ್ತಿದೆ. ಪ್ರಸ್ತುತ ಹಾಲಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ವರ್ಷದಿಂದಲೂ ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂದು ಹಲವು ಬಣಗಳು ಹುಟ್ಟಿಕೊಂಡಿವೆ. ಆದರೆ ಇದೀಗ ಅಚ್ಚರಿಯ ಎಂಬಂತೆ ಹೈಕಮಾಂಡ್ ಇದು ಯಾವುದಕ್ಕೂ ಸೊಪ್ಪು ಹಾಕದೆ 2028 ರ ವರೆಗೆ ಬಿ ವೈ ವಿಜಯೇಂದ್ರ ಅವರೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮುಂದುವರಿಸಲು ತೀರ್ಮಾನಿಸಿದೆ ಎನ್ನಲಾಗಿದೆ

ಹೌದು, ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಜನವರಿ 20ರಂದು ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ.  ಉತ್ತರ ಪ್ರದೇಶ, ಬಿಹಾರ, ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ಸುಮಾರು 30 ರಾಜ್ಯ ಘಟಕಗಳಿಗೆ ನೂತನ ಸಾರಥಿಗಳ ನೇಮಕ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಆದರೆ, ಪ್ರಮುಖ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಮಾತ್ರ ನಾಯಕತ್ವದ ಬದಲಾವಣೆ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ.

ಬಿಜೆಪಿ ಪ್ರತ್ಯೇಕ ಬಣದ ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಆದರೆ ಕರ್ನಾಟಕ 

2028ರ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ವೇಳೆ ನಾಯಕತ್ವದ ಬದಲಾವಣೆಯ ಬಗ್ಗೆ ಚರ್ಚೆ ನಡೆಸಲಾಗುವುದು, ಅಲ್ಲಿಯವರೆಗೆ ಈಗಿರುವ ವ್ಯವಸ್ಥೆಯನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ. ಸದ್ಯ ಕರ್ನಾಟಕದಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರ ತಣ್ಣಗಾಗಿದೆ.  ಒಟ್ನಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಭರವಸೆ ಹೊತ್ತಿದ್ದ ರೆಬಲ್‌ ನಾಯಕರ ತಂಡಕ್ಕೆ ಸದ್ಯ ಬಿಜೆಪಿ ಹೈಕಮಾಂಡ್‌ ತಣ್ಣೀರೆರಚಿದೆ.