Home Karnataka State Politics Updates Aland Voter Fraud: ಆಳಂದದಲ್ಲಿ ಗುತ್ತೇದಾರ್ ಸೂತ್ರದಂತೆ ಮತಗಳವು: ಎಸ್‌ಐಟಿಯಿಂದ ಚಾರ್ಜ್‌ಶೀಟ್‌

Aland Voter Fraud: ಆಳಂದದಲ್ಲಿ ಗುತ್ತೇದಾರ್ ಸೂತ್ರದಂತೆ ಮತಗಳವು: ಎಸ್‌ಐಟಿಯಿಂದ ಚಾರ್ಜ್‌ಶೀಟ್‌

Hindu neighbor gifts plot of land

Hindu neighbour gifts land to Muslim journalist

Aland Voter Fraud: ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ (Aland Voter Fraud) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT) ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ(Chargesheet) ಸಲ್ಲಿಸಿದೆ.

22 ಸಾವಿರ ಪುಟಗಳ ದೋಷರೋಪ ಪಟ್ಟಿಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್(Subhash Guttedar), ಪುತ್ರ ಹರ್ಷಾನಂದ ಸೇರಿ 7 ಮಂದಿಯನ್ನು ಆರೋಪಿಗಳು ಎಂದು ಹೆಸರಿಸಲಾಗಿದೆ.5,994 ಮತಗಳನ್ನು ಅಳಿಸಿ ಹಾಕಲು ಕಾಲ್ ಸೆಂಟರ್ ಬಳಕೆ ಮಾಡಲಾಗಿದೆ. ಮತ ಕಳವಿಗೆ ಮಾಜಿ ಶಾಸಕರು ಹಣ ಕೂಡ ಪಾವತಿ ಮಾಡಿದ್ದಾರೆ.

ದಾಳಿ ವೇಳೆ ಸಿಕ್ಕಿದ ಡಿಜಿಟಲ್‌ ಸಾಕ್ಷ್ಯದಿಂದ ಕೃತ್ಯ ಸಾಬೀತಾಗಿದೆ. ಈ ಕೃತ್ಯದಲ್ಲಿ ತಂದೆ-ಮಗ ಪ್ರಮುಖ ಆರೋಪಿಗಳು ಎಂದು ಉಲ್ಲೇಖಿಸಲಾಗಿದೆ. ಶಾಸಕ ಬಿ.ಆರ್.ಪಾಟೀಲ್ (BR Patil) ವೋಟ್‌ಚೋರಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಬಿ.ಕೆ. ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿತ್ತು. ಬಂಧನ ಭೀತಿಯಲ್ಲಿ ಈಗಾಗಲೇ ಸುಭಾಷ್ ಗುತ್ತೇದಾರ್, ಪುತ್ರ ಹರ್ಷಾನಂದ ಜಾಮೀನು ಪಡೆದುಕೊಂಡಿದ್ದಾರೆ.ನಾಳೆ ದೆಹಲಿಯಲ್ಲಿ ಕಾಂಗ್ರೆಸ್‌ ವೋಟ್ ಚೋರಿ ಪ್ರತಿಭಟನೆ ಆಯೋಜಿಸಿದೆ. ಈ ಪ್ರತಿಭಟನೆಗೆ ಮುನ್ನ ಎಸ್‌ಐಟಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದು ಕಾಂಗ್ರೆಸ್‌ಗ ದೊಡ್ಡ ಅಸ್ತ್ರ ಸಿಕ್ಕಿದಂತಾಗಿದೆ.