Home Karnataka State Politics Updates Yatindra Siddaramaia: “ಅಮಿತ್ ಶಾ ಗೂಂಡ, ರೌಡಿ” : ಕೇಂದ್ರ ಗೃಹ ಸಚಿವ...

Yatindra Siddaramaia: “ಅಮಿತ್ ಶಾ ಗೂಂಡ, ರೌಡಿ” : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಯತೀಂದ್ರ ಸಿದ್ದರಾಮಯ್ಯ

Hindu neighbor gifts plot of land

Hindu neighbour gifts land to Muslim journalist

ಲೋಕಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದ್ದಂತೆ ಪಕ್ಷಗಳ ಮುಖಂಡರು ಒಬ್ಬರ ಮೇಲೆ ಒಬ್ಬರು ವಾಗ್ದಾಳಿ ಮುಂದುವರಿಸಿದ್ದಾರೆ. ಇದೀಗ ಯತಿಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಗೂಂಡ ರೌಡಿ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Congress Income Tax Notice: ಕಾಂಗ್ರೆಸ್‌ಗೆ ಮತ್ತೊಮ್ಮೆ ಆದಾಯ ತೆರಿಗೆ ನೋಟಿಸ್‌; 1700 ಕೋಟಿ ದಂಡ

ಬಿಜೆಪಿ ನಾಯಕ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ‘ಗೂಂಡಾ, ರೌಡಿ’ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ, ‘ಪ್ರಧಾನಿ ಮೋದಿ ಅವರ ಸಹಚರಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Parliament Election: ಲಿಂಗಾಯತ ಹಾಗೂ ಒಕ್ಕಲಿಗ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯಲ್ಲಿ ಸಿಂಹ ಪಾಲು

ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಅವರು (ಅಮಿತ್ ಶಾ) ಗುಜರಾತ್‌ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಆತನಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಯತೀಂದ್ರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, ನಿರುದ್ಯೋಗಿಗಳಿಗೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಈಗ ಉದ್ಯೋಗ ಸೃಷ್ಟಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲ ಎನ್ನುತ್ತಾರೆ. ಕಪ್ಪುಹಣ ತರುವುದಾಗಿ ಭರವಸೆ ನೀಡಿದರು. ಆದರೆ ಅದು ಏನಾಯಿತು? ಸ್ವಿಸ್‌ ಬ್ಯಾಂಕ್‌ನಲ್ಲಿರುವ ಖಾತೆದಾರರ ಹೆಸರನ್ನು ಸಹ ಅವರು ಬಹಿರಂಗಪಡಿಸಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.