Home Education Savanuru: ಜ. 20 ಮತ್ತು 21ರಂದು ಸವಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ...

Savanuru: ಜ. 20 ಮತ್ತು 21ರಂದು ಸವಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ

Savanuru

Hindu neighbor gifts plot of land

Hindu neighbour gifts land to Muslim journalist

 

ಸವಣೂರು : ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾ.ಪಂ. ಹಾಗೂ ಸವಣೂರು ಯುವಕ ಮಂಡಲದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಜ. 20 ಮತ್ತು 21ರಂದು ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಇದನ್ನೂ ಓದಿ: Health Care: ಯಾವುದೇ ಕಾರಣಕ್ಕೂ ಈ ಸಮಯದಲ್ಲಿ ಹಸಿರು ಬಟಾಣಿಯನ್ನು ತಿನ್ನಲೇಬಾರದು

ಜ. 20ರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವಜನರು ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು ಹಾಗೂ 15 ರಿಂದ 35 ವರ್ಷದೊಳಗಿರಬೇಕು.

ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯಕ್ ಹಾಗೂ ದ.ಕ. ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಅವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.