Home Latest Sports News Karnataka Team India Coach: ಟೀಂ ಇಂಡಿಯಾಕ್ಕೆ ಇನ್ನು ಗೌತಮ್ ಗಂಭೀರ್ ಹೊಸ ಕೋಚ್ – ಜಯ್...

Team India Coach: ಟೀಂ ಇಂಡಿಯಾಕ್ಕೆ ಇನ್ನು ಗೌತಮ್ ಗಂಭೀರ್ ಹೊಸ ಕೋಚ್ – ಜಯ್ ಶಾ ಘೋಷಣೆ!!

Team India Coach

Hindu neighbor gifts plot of land

Hindu neighbour gifts land to Muslim journalist

Team India Coach ಯಾರಾಗುತ್ತಾರೆ ಅನ್ನೋ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್(Goutham Gambeer) ಭಾರತ ತಂಡದ ಮುಖ್ಯ ಕೋಚ್ ಆಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಬಿಸಿಸಿಐ(BCCI) ಕಾರ್ಯದರ್ಶಿ ಜಯ್ ಶಾ ಘೋಷಣೆ ಮಾಡಿದ್ದಾರೆ.

ಹೌದು, ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್(KKR) ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದ ಗೌತಮ್ ಗಂಭೀರ್ ಇದೀಗ ಕೆಕೆಆರ್ ತಂಡಕ್ಕೆ ವಿದಾಯ ಹೇಳಲು ಮುಂದಾಗಿದ್ದಾರೆ. ಇದಕ್ಕೆ ಕಾರಣ ಅವರು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಲೆಗಸಿಯನ್ನು ಮುಂದುವರಿಸಿ ಮತ್ತಷ್ಟು ಟ್ರೋಫಿ ಕೈವಶ ಮಾಡಲು ಟೀಂ ಇಂಡಿಯಾ ನೂತನ ಕೋಚ್ ಜವಾಬ್ದಾರಿ ಯಾರು ವಹಿಸಿಕೊಳ್ಳಲಿದ್ದಾರೆ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ.

ಈ ಬೆನ್ನಲ್ಲೇ ಜಯ್ ಶಾ(Jay shah) ಟ್ವೀಟ್ ಮಾಡಿ ‘ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಸ್ವಾಗತಿಸಲು ಅಪಾರ ಸಂತೋಷವಾಗುತ್ತಿದೆ. ಆಧುನಿಕ ಕ್ರಿಕೆಟ್ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಗೌತಮ್ ಗಂಭೀರ್ ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ನೋಡಿದ್ದಾರೆ. ತಮ್ಮ ಕ್ರಿಕೆಟ್ ಕರಿಯರ್‌ನಲ್ಲಿ ಗೌತಮ್ ಗಂಭೀರ್ ಹಲವು ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಹೀಗಾಗಿ ಗೌತಮ್ ಗಂಭೀರ್, ಮುಖ್ಯ ಕೋಚ್ ಆಗಿ ಟೀಂ ಇಂಡಿಯಾವನ್ನು ಮುನ್ನಡೆಸಲು ಗೌತಮ್ ಗಂಭೀರ್ ಸೂಕ್ತ ವ್ಯಕ್ತಿ ಅನ್ನೋ ವಿಶ್ವಾಸ ನನಗಿದೆ. ಟೀಂ ಇಂಡಿಯಾ ಮುಂದಿನ ಪಯಣದ ಕುರಿತು ಗಂಭೀರ್‌ಗೆ ಇರುವ ದೂರದೃಷ್ಟಿ, ಅವರ ಅನುಭವ ತಂಡಕ್ಕೆ ನೆರವಾಗಲಿದೆ. ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಗೌತಮ್ ಗಂಭೀರ್‌ಗೆ ಬಿಸಿಸಿಐ ಸಂಪೂರ್ಣ ಸಹಕಾರ ನೀಡಲಿದೆ’ ಎಂದು ಬರೆದುಕೊಂಡಿದ್ದಾರೆ.

ಇನ್ನು ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಹಂಗಾಮಿ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಂಡಿದ್ದಾರೆ. ಈ ಸರಣಿ ಮುಕ್ತಾಯದ ಬಳಿಕ ಲಕ್ಷ್ಮಣ್ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಹೊಸ ಕೋಚ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

SSLC Supplimentary Result: ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ- ರಿಸಲ್ಟ್‌ ಚೆಕ್‌ ಮಾಡಲು ಲಿಂಕ್‌ ಇಲ್ಲಿದೆ