ಶನಿವಾರ, 24 ಅಕ್ಟೋಬರ್ 2026

ODI World Cup 2023: ಭಾರತ-ಪಾಕಿಸ್ತಾನ ಮ್ಯಾಚ್‌ ಬಗ್ಗೆ ಬಿಗ್‌ ಅಪ್ಡೇಟ್‌ ರಿವೀಲ್‌! ಇಲ್ಲಿದೆ ಎಲ್ಲಾ ವಿವರ

ಭಾರತದಲ್ಲಿ ನಡೆಯಲಿರುವ ಏಕದಿನ ಪಂದ್ಯದಲ್ಲಿ (ODI World Cup 2023) ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ODI World Cup 2023
Image source: Kannada News

ODI World Cup 2023: ವಿಶ್ವಕಪ್ ಕುರಿತಾದ ಬಿಗ್​ ಅಪ್​ಡೇಟ್​ವೊಂದು ಹೊರಬಿದ್ದಿದ್ದು, ಅಕ್ಟೋಬರ್ – ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ಪಂದ್ಯದಲ್ಲಿ (ODI World Cup 2023) ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ಸದ್ಯ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ.

ವರದಿ ಪ್ರಕಾರ, ಅಹಮದಾಬಾದ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಸದ್ಯ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಸಿದ್ದವಾಗಲಿದೆ.

ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ – ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಟೂರ್ನಿಯ ಒಂದು ಸೆಮಿಫೈನಲ್​ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.

ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:Megha Shetty: ‘ಜೊತೆಜೊತೆಯಲಿ’ ಸೀರಿಯಲ್ ನಿಂದ ಮೇಘಾ ಶೆಟ್ಟಿ ವಿದಾಯ!

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ