Home Latest Sports News Karnataka Cricket: ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಐಯ್ಯರ್ ಐಸಿಯುಗೆ ದಾಖಲು

Cricket: ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಐಯ್ಯರ್ ಐಸಿಯುಗೆ ದಾಖಲು

Hindu neighbor gifts plot of land

Hindu neighbour gifts land to Muslim journalist

Cricket: ಭಾರತ-ಆಸ್ಟ್ರೇಲಿಯಾ ಸರಣಿಯ (Cricket) ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾದ ಉಪನಾಯಕ ಶ್ರೇಯಸ್‌ ಅಯ್ಯರ್‌ರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೇಯಸ್‌ ಅಯ್ಯರ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಬಾಗದ ಅಂಗದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದೇ ಕಾರಣದಿಂದಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಸದ್ಯ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೇಯಸ್ ಅಯ್ಯರ್ ಇನ್ನೂ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ.

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್‌ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟು ಬಿದ್ದಿದೆ.