Home Latest Sports News Karnataka Women’s World Cup: ಮೊದಲಬರಿ ಏಕದಿನ ವಿಶ್ವಕಪ್‌ ಕಿರೀಟ ಮುಡಿಗೇರಿಸಿಕೊಂಡ ಭಾರತದ ಸಿಂಹಿಣಿಯರ ತಂಡ !!

Women’s World Cup: ಮೊದಲಬರಿ ಏಕದಿನ ವಿಶ್ವಕಪ್‌ ಕಿರೀಟ ಮುಡಿಗೇರಿಸಿಕೊಂಡ ಭಾರತದ ಸಿಂಹಿಣಿಯರ ತಂಡ !!

Hindu neighbor gifts plot of land

Hindu neighbour gifts land to Muslim journalist

Women’s World Cup: 2025 ರ ಮಹಿಳಾ ವಿಶ್ವಕಪ್​ನ ಫೈನಲ್ (Women’s ODI World Cup Final 2025) ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ (India vs South Africa) ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ.

ಹೌದು, ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 246 ರನ್ ಕಲೆಹಾಕಲಷ್ಟೇ ಶಕ್ತವಾಗಿ 52 ರನ್​ಗಳಿಗೆ ಸೋಲೊಪ್ಪಿಕೊಂಡಿತು. ಈ ಮೂಲಕ ಭಾರತ ತಂಡ ಮೂರನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿ ಟ್ರೋಫಿಯನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ.

ಟೀಮ್ ಇಂಡಿಯಾದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ದೀಪ್ತಿ ಶರ್ಮಾ 5 ವಿಕೆಟ್ ಗಳನ್ನು ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಬೆನ್ನೆಲುಬು ಮುರಿಯುವಲ್ಲಿ ಯಶಸ್ವಿಯಾದರು.ಆ ಮೂಲಕ ಭಾರತ ತಂಡವು ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದರು.